ಮಡಿಕೇರಿ: ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎಸ್ ಎಸ್ ಎಲ್ ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು. ಸದ್ಯ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಅಡಗಿದ್ದ ಆರೋಪಿ ಪ್ರಕಾಶ್ನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಡಿಕೇರಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದ್ದಾರೆ.