Home ಟಾಪ್ ಸುದ್ದಿಗಳು ಸಂವಿಧಾನ ಉಳಿಸಲು ಕೇಂದ್ರದ ಪ್ರತಿಪಕ್ಷಗಳ ನಾಯಕರ ಸಭೆ ನಡೆಯುತ್ತಿದೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಸಂವಿಧಾನ ಉಳಿಸಲು ಕೇಂದ್ರದ ಪ್ರತಿಪಕ್ಷಗಳ ನಾಯಕರ ಸಭೆ ನಡೆಯುತ್ತಿದೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಸಂವಿಧಾನ ಉಳಿಸಲು ಕೇಂದ್ರದ ಪ್ರತಿಪಕ್ಷಗಳ ನಾಯಕರ ಸಭೆ ನಡೆಯುತ್ತಿದೆ. ಎಲ್ಲರೂ ಒಟ್ಟಾಗಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.


ಮಹಾ ಘಟಬಂಧನ್ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ ವಿವಿಧ ರಾಜ್ಯಗಳ ಮುಖಂಡರನ್ನು ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಹಿರಿಯ ಸಚಿವ ಎಂ.ಬಿ ಪಾಟೀಲ್ ಜೊತೆ ಬರಮಾಡಿಕೊಂಡ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ದೇಶದ ಹಿತಾಸಕ್ತಿ ದೃಷ್ಟಿಯಿಂದ ಮಹತ್ವ ಪಡೆದಿದೆ ಎಂದರು.
ಹಲವು ರಾಷ್ಟ್ರೀಯ ನಾಯಕರನ್ನು ಸ್ವಾಗತಿಸಲು ಪಕ್ಷ ನನಗೆ ಜವಾಬ್ದಾರಿ ನೀಡಿತ್ತು. ಅದರಂತೆ ನಾನು ಹಾಗೂ ಸಚಿವ ಎಂ.ಬಿ.ಪಾಟೀಲ್ ಅವರು ರಾಷ್ಟ್ರೀಯ ನಾಯಕರನ್ನ ಸ್ವಾಗತಿಸಿದ್ದೇವೆ. ಸಭೆಯ ಉದ್ದೇಶ, ಅಜೆಂಡಾವನ್ನು ಹಿರಿಯರು ನೋಡ್ತಾರೆ. ಪಾಟ್ನಾದಲ್ಲಿ ನಡೆದ ಸಭೆಯ ಮುಂದುವರೆದ ಭಾಗವಾಗಿ ಬೆಂಗಳೂರು ನಲ್ಲಿ ಈ ಸಭೆ ನಡೆಯುತ್ತಿದೆ ಎಂದು ತಿಳಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಸಭೆ ಕುರಿತು ಪ್ರತಿಪಕ್ಷಗಳ ಟೀಕೆಗೆ ಅರ್ಥವಿಲ್ಲ ಎಂದು ಹೇಳಿದರು.

Join Whatsapp
Exit mobile version