ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ – 2023 ರ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ.
ಈ ಕುರಿತು ಇಂದು ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಾಜ್ಯದ ಮಾನ್ಯತೆ ಪಡೆದ ಹಾಗೂ ನೋಂದಾಯಿತ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಪ್ರಕಟಿಸಲಾಗಿರುವ ಅಂತಿಮ ಮತದಾರರ ಪಟ್ಟಿ ಕುರಿತು ಚರ್ಚಿಸಲಾಯಿತು ಹಾಗೂ ಈ ಸಂದರ್ಭದಲ್ಲಿ ಪರಿಷ್ಕರಣೆ ಕುರಿತಂತೆ ಆಯೋಗ ತೆಗೆದುಕೊಂಡಿರುವ ಕ್ರಮಗಳ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮಾಹಿತಿಯನ್ನು ಪಡೆದರು ಹಾಗೂ ಕೆಲವು ಸಲಹೆಗಳನ್ನು ನೀಡಿದರು.
ಸಭೆಯಲ್ಲಿ ಸಿಪಿಐ, ಸಿಪಿಐಎಂ, ಕಾಂಗ್ರೇಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿಗಳಾದ ವೆಂಕಟೇಶ್ ಕುಮಾರ್, ರಾಜೇಂದ್ರ ಚೋಳನ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.