Home ಕರಾವಳಿ ನಾಳೆ ಮಂಗಳೂರಿನಲ್ಲಿ ಬೃಹತ್ “ಗರ್ಲ್ಸ್ ಕಾನ್ಫರೆನ್ಸ್”

ನಾಳೆ ಮಂಗಳೂರಿನಲ್ಲಿ ಬೃಹತ್ “ಗರ್ಲ್ಸ್ ಕಾನ್ಫರೆನ್ಸ್”

ಮಂಗಳೂರು: ‘ ಆಯ್ಕೆಯ ಸ್ವಾತಂತ್ರ್ಯವನ್ನು ಖಾತರಿಪಡಿಸೋಣ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯೋಣ’ ಎಂಬ ಘೋಷವಾಕ್ಯದಡಿಯಲ್ಲಿ ನಾಳೆ ಶನಿವಾರ ಮಂಗಳೂರಿನ ಟೌನ್ ಹಾಲ್ ನಲ್ಲಿ ಬೃಹತ್ “ಗರ್ಲ್ಸ್ ಕಾನ್ಫರೆನ್ಸ್” ಕಾರ್ಯಕ್ರಮ ಜರುಗಲಿದೆ .

ಈಗಾಗಲೇ ಈ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆಸಲಾಗಿದ್ದು , ಸಾವಿರಾರು ವಿದ್ಯಾರ್ಥಿನಿಯರು ಭಾಗವಹಿಸುವ ನಿರೀಕ್ಷೆ ಇದೆ ಎನ್ನಲಾಗಿದೆ.

ಮಹಿಳೆಯರ, ಮುಸ್ಲಿಂ ವಿದ್ಯಾರ್ಥಿನಿಯರ ಆಯ್ಕೆಯ ಸ್ವಾತಂತ್ರ್ಯವನ್ನು ಕಿತ್ತುಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲುಗೊಳಿಸಲು ಹೊರಟಿರುವ ಪ್ರಭುತ್ವದ ಕುತಂತ್ರವನ್ನು ವಿಫಲಗೊಳಿಸಲು ರಾಜಿ ರಹಿತ ಹೋರಾಟ ಒಂದೇ ದಾರಿ ಎಂಬುದನ್ನು ಅರಿತು ಮುನ್ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು “ಆಯ್ಕೆಯ ಸ್ವಾತಂತ್ರ್ಯವನ್ನು ಖಾತರಿಪಡಿಸೋಣ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯೋಣ” ಎಂಬ ಘೋಷವಾಕ್ಯದೊಂದಿಗೆ ನಾಳೆ (ಜುಲೈ 16) ರಂದು ಮಂಗಳೂರಿನಲ್ಲಿ ಬೃಹತ್ “ಗರ್ಲ್ಸ್ ಕಾನ್ಫರೆನ್ಸ್” ಹಮ್ಮಿಕೊಂಡಿದೆ. ಬೆಳಿಗ್ಗೆ 11 ಗಂಟೆಗೆ ಜ್ಯೋತಿ ವೃತ್ತದಿಂದ ವಿದ್ಯಾರ್ಥಿನಿಯರ ಜಾಥಾ ಪ್ರಾರಂಭಗೊಂಡು ಪುರಭವನದಲ್ಲಿ ಸಮಾಪ್ತಿಗೊಳ್ಳಲಿದೆ. ಪುರಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಹಾಗೂ ರಾಜ್ಯದ ಹಲವಾರು ಹೋರಾಟಗಾರರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Join Whatsapp
Exit mobile version