ಮೇಘಾಲಯ ಸಿಎಂ ಕಚೇರಿ ಮೇಲೆ ದಾಳಿ: ಬಿಜೆಪಿ ಪದಾಧಿಕಾರಿಗಳು ಸೇರಿ 18 ಮಂದಿಯ ಬಂಧನ

Prasthutha|

ಶಿಲ್ಲಾಂಗ್: ಮೇಘಾಲಯ ಮುಖ್ಯಮಂತ್ರಿ ಕಚೇರಿ ಮೇಲೆ ಪ್ರತಿಭಟನಕಾರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಹಿಳಾ ಮೋರ್ಚಾದ ಇಬ್ಬರು ಪದಾಧಿಕಾರಿಗಳು ಸೇರಿದಂತೆ 18 ಜನರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

- Advertisement -


ಬಿಜೆಪಿ ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಬೆಲಿನಾ ಎಂ ಮರಕ್, ದಿಲ್ಚೆ ಚ್ ಮರಕ್ ಬಂಧಿತರು ಎಂದು ಅವರು ಹೇಳಿದ್ದಾರೆ.


ದಾಳಿಗೆ ಪ್ರಚೋದಿಸಿದ ಆರೋಪ ಹೊತ್ತಿರುವ ತೃಣಮೂಲ ಕಾಂಗ್ರೆಸ್ನ ಇಬ್ಬರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದಿದ್ದಾರೆ.

Join Whatsapp