Home ಟಾಪ್ ಸುದ್ದಿಗಳು ಮೇಘಾಲಯ ಸಿಎಂ ಕಚೇರಿ ಮೇಲೆ ದಾಳಿ: ಬಿಜೆಪಿ ಪದಾಧಿಕಾರಿಗಳು ಸೇರಿ 18 ಮಂದಿಯ ಬಂಧನ

ಮೇಘಾಲಯ ಸಿಎಂ ಕಚೇರಿ ಮೇಲೆ ದಾಳಿ: ಬಿಜೆಪಿ ಪದಾಧಿಕಾರಿಗಳು ಸೇರಿ 18 ಮಂದಿಯ ಬಂಧನ

ಶಿಲ್ಲಾಂಗ್: ಮೇಘಾಲಯ ಮುಖ್ಯಮಂತ್ರಿ ಕಚೇರಿ ಮೇಲೆ ಪ್ರತಿಭಟನಕಾರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಹಿಳಾ ಮೋರ್ಚಾದ ಇಬ್ಬರು ಪದಾಧಿಕಾರಿಗಳು ಸೇರಿದಂತೆ 18 ಜನರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.


ಬಿಜೆಪಿ ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಬೆಲಿನಾ ಎಂ ಮರಕ್, ದಿಲ್ಚೆ ಚ್ ಮರಕ್ ಬಂಧಿತರು ಎಂದು ಅವರು ಹೇಳಿದ್ದಾರೆ.


ದಾಳಿಗೆ ಪ್ರಚೋದಿಸಿದ ಆರೋಪ ಹೊತ್ತಿರುವ ತೃಣಮೂಲ ಕಾಂಗ್ರೆಸ್ನ ಇಬ್ಬರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದಿದ್ದಾರೆ.

Join Whatsapp
Exit mobile version