Home ಟಾಪ್ ಸುದ್ದಿಗಳು ಮೇಕೆದಾಟು: ಎರಡನೇ ಹಂತದ ಪಾದಯಾತ್ರೆಗೆ ರಾಮನಗರದಲ್ಲಿ ಭವ್ಯ ಚಾಲನೆ

ಮೇಕೆದಾಟು: ಎರಡನೇ ಹಂತದ ಪಾದಯಾತ್ರೆಗೆ ರಾಮನಗರದಲ್ಲಿ ಭವ್ಯ ಚಾಲನೆ

ಬೆಂಗಳೂರು: ಮೇಕೆದಾಟು ಎರಡನೇ ಹಂತದ ಪಾದಯಾತ್ರೆಗೆ ರಾಮನಗರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದಲ್ಲಿ ವಂದೇ ಮಾತರಂ, ನಾಡಗೀತೆ, ರೈತಗೀತೆ ಮೂಲಕ ಚಾಲನೆ ನೀಡಲಾಯಿತು.

ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ಏಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಪಾದಯಾತ್ರೆಗೆ ಚಾಲನೆ ನೀಡಿದರು. ಕಾಂಗ್ರೆಸ್ ಮುಖಂಡರು ನಗಾರಿ ಬಾರಿಸುವ ಮೂಲಕ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಶ್ರೀ ಕ್ಷೇತ್ರ ಆದಿಚುಂಚನಗಿರಿಯ ರಾಮನಗರ ಶಾಖಾ ಮಠದ  ಶ್ರೀ ಅನ್ನದಾನಿ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವರಾದ ಕೆ ಎಚ್ ಮುನಿಯಪ್ಪ, ಸಂಸದ ಡಿ.ಕೆ. ಸುರೇಶ್, ರಾಜ್ಯದ ಮಾಜಿ ಸಚಿವರಾದ ಹೆಚ್.ಕೆ ಪಾಟೀಲ್, ಅಲ್ಲಂ ವೀರಭದ್ರಪ್ಪ, ಎಚ್.ಎಂ. ರೇವಣ್ಣ, ಎಂ.ಬಿ. ಪಾಟೀಲ್, ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಧ್ರುವ ನಾರಾಯಣ್,  ರಾಜ್ಯಸಭಾ ಸದಸ್ಯರಾದ ಜಿ.ಸಿ ಚಂದ್ರಶೇಖರ್, ಡಾ ಎಲ್ ಹನುಮಂತಯ್ಯ, ನಾಸೀರ್ ಹುಸೇನ್, ವಿಧಾನ ಸಭಾ ಉಪ ನಾಯಕರಾದ ಯು.ಟಿ ಖಾದರ್, ವಿಧಾನ ಪರಿಷತ್ ವಿರೋಧ ಪಕ್ಷದ ಉಪನಾಯಕ ಗೋವಿಂದರಾಜ್, ಚಿತ್ರನಟರಾದ ನೆನಪಿರಲಿ ಪ್ರೇಮ್, ಸಾಧು ಕೋಕಿಲ, ಎಂಎಲ್ಸಿ ಎಸ್. ರವಿ ಮತ್ತಿತರರು ಭಾಗವಹಿಸಿದ್ದರು.

Join Whatsapp
Exit mobile version