ಬೆಂಗಳೂರು: ಶೈಕ್ಷಣಿಕ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ನಡುವೆ ವೈಷಮ್ಯ ಮೂಡಿಸಲಾಗುತ್ತಿದೆ ಎಂದು ಆರೋಪಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಶಾಸಕರು ಕೈಗೆ ಕಪ್ಪು ಪಟ್ಟಿ ಧರಿಸಿ ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸಿದ್ದಾರೆ.
ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ಬೆಳಗ್ಗೆ 11 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಆರಂಭಿಸಿದರು. ಈ ವೇಳೆ ಕಾಂಗ್ರೆಸ್ ಸದಸ್ಯರು ಕಪ್ಪು ಪಟ್ಟಿ ಧರಿಸಿ ಅಧಿವೇಶನಕ್ಕೆ ಆಗಮಿಸಿದರು.