ಮಂಗಳೂರು: ಬೈಕ್ ಗೆ ಶ್ವಾನ ಕಟ್ಟಿ ಹೆದ್ದಾರಿಯಲ್ಲೇ ಎಳೆದೊಯ್ದ ದುರುಳರು!

Prasthutha: April 22, 2021

ಮಂಗಳೂರು: ಕೇರಳದಲ್ಲಿ ನಾಯಿಯನ್ನು ದರ ದರನೇ ಎಳ್ಕೊಂಡು ಹೋಗಿದ್ದು ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಆದರೆ, ಇದೀಗ ಅಂತದೊಂದು ಮನಕಲಕುವ ಘಟನೆ ಕಡಲ ತಡಿ ಮಂಗಳೂರಿನಲ್ಲಿಯೇ ನಡೆದಿದೆ!

ಬಡಪಾಯಿ ಶ್ವಾನವನ್ನು ಹಗ್ಗದಲ್ಲಿ ಕಟ್ಟಿ ಹಾಕಿ ಬೈಕ್ ನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಳ್ಕೊಂಡು ಹೋಗುವ ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಎನ್ ಐ ಟಿಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಬೈಕಿನಲ್ಲಿ ಮಧ್ಯವಯಸ್ಕರಿಬ್ಬರು ಕುಳಿತು ನಾಯಿಯನ್ನು ಬಿಗಿಯಾಗಿ ಕಟ್ಟಿ ಎಳ್ಕೊಂಡು ಹೋಗುವ ದೃಶ್ಯವನ್ನು ಇನ್ಯಾರೋ ಬೇರೆ ಬೈಕ್ ನವರು ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ಈ ಘಟನೆ ಏಪ್ರಿಲ್ 15ರ ರಾತ್ರಿ ಸುಮಾರು 8.30ರ ಸಮಯದಲ್ಲಿ ನಡೆದಿದೆ ಎನ್ನಲಾಗಿದೆ. ವೀಡಿಯೊ ನೋಡಿ ಪ್ರಾಣಿಪ್ರಿಯರೂ ಸಿಡಿದೆದ್ದಿದ್ದಾರೆ. ಮನುಷ್ಯತ್ವ ಇಲ್ಲದೆ ಈ ರೀತಿಯಾಗಿ ವರ್ತಿಸಿದವರನ್ನು ಬಂಧಿಸುವಂತೆ ಒತ್ತಾಯ ಕೇಳಿ ಬಂದಿದೆ. ಪೊಲೀಸರು ಈ ಕೃತ್ಯದ ಬಗ್ಗೆ ಏನು ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!