ಪುರುಷರಿಗೂ ಉಚಿತ ಯೋಜನೆಗಳು ಬೇಕು: ವಾಟಾಳ್ ನಾಗರಾಜ್ ಪ್ರತಿಭಟನೆ

Prasthutha|

ಬೆಂಗಳೂರು: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಲು ಶಕ್ತಿ ಯೋಜನೆ ಜಾರಿಗೆ ತಂದಂತೆ ಪುರುಷರಿಗೂ ಉಚಿತ ಪ್ರಯಾಣದ ಯೋಜನೆ ಜಾರಿಗೆ ತರುವಂತೆ ಒತ್ತಾಯಿಸಿ ಇಂದು ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

- Advertisement -

ವಾಟಾಳ್ ನಾಗರಾಜ್ ಇಂದು 12 ಗಂಟೆಗೆ ಮೆಜೆಸ್ಟಿಕ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಬೆಂಗಳೂರಿನ ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡುವ ಮೂಲಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಪುರುಷರಿಗೂ ಮೀಸಲಿಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡಲಿದ್ದಾರೆ. ಮಹಿಳೆಯರಿಗಾಗಿ ಈಗಾಗಲೇ ಶಕ್ತಿ ಯೋಜನೆ, ಗೃಹಲಕ್ಷ್ಮೀ ಯೋಜನೆ ಸರ್ಕಾರ ನೀಡಿದೆ. ಆದರೆ ಪುರುಷರಿಗೆ ಯಾವುದೇ ಉಚಿತ ಯೋಜನೆ ನೀಡಿಲ್ಲ. ಕೇವಲ ಮಹಿಳೆಯರಿಗೆ‌ ಮಾತ್ರ ಸರಕಾರ ಉಚಿತ ಯೋಜನೆ ನೀಡುತ್ತಿದೆ. ಸರ್ಕಾರದ ಈ ನಡೆಯನ್ನು ಖಂಡಿಸಿದ ವಾಟಾಳ್ ನಾಗರಾಜ್, ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ನೀಡಿದಂತೆ ಪುರುಷರಿಗೆ ನಾರಾಯಣ ಯೋಜನೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ.

Join Whatsapp