ಮಾನಸಿಕ ಖಿನ್ನತೆ; ಅಮೃತ್ ಪೌಲ್‍ ಗೆ ನಿಮ್ಹಾನ್ಸ್ ನಲ್ಲಿ ಚಿಕಿತ್ಸೆ

Prasthutha|

ಬೆಂಗಳೂರು: ಪಿಎಸ್ಐ  ನೇಮಕಾತಿ ಹಗರಣದಲ್ಲಿ ಬಂಧಿತರಾಗಿ ಅಮಾನತು ಗೊಂಡು ಒಂಟಿತನದಿಂದ ಖಿನ್ನತೆ ಒಳಗಾಗಿರುವ ಎಡಿಜಿಪಿ ಅಮೃತ್ ಪೌಲ್‍  ಅವರಿಗೆ ಜೈಲು ಅಧಿಕಾರಿಗಳು ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.

- Advertisement -

ಸ್ವಚ್ಛಂದವಾಗಿ ಹಾರಾಡಿಕೊಂಡಿದ್ದ ಹಿರಿಯ ಅಧಿಕಾರಿ ಜೈಲು ಸೇರಿದ ಬಳಿಕ   ಮಾನಸಿಕವಾಗಿ ಹಿಂಸೆ ಅನುಭವಿಸುತ್ತಿದ್ದಾರೆ. ಅದೆಷ್ಟೋ ಆರೋಪಿಗಳನ್ನು ಜೈಲಿಗೆ ಕಳುಹಿಸಿದ್ದ ಅಮೃತ್ ಪೌಲ್ ಅದೇ ಆರೋಪಿಗಳ ಜೊತೆ ಕಾಲ ಕಳೆಯುವಂತಾಗಿದೆ.

ಇದೀಗ ಆರೋಪಿಗಳ ಜೊತೆ ಬೆರೆಯುವುದಕ್ಕೂ ಆಗದೆ ಒಂಟಿತನ ಅನುಭವಿಸುತ್ತಿರುವ ಅವರು ಖಿನ್ನತೆಗೆ ಒಳಗಾಗಿದ್ದಾರೆ.

- Advertisement -

ಅಮೃತ್ ಪೌಲ್ ಬಂಧನವಾಗುವ ಮುಂಚೆಯಿಂದಲೂ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಮಾಡಿದ ಕೆಲಸದಿಂದ ಜೈಲು ಸೇರಿದ ಬಳಿಕ  ಅವರಿಗಿದ್ದ ಸಮಸ್ಯೆ ಉಲ್ಬಣವಾಗಿದೆ.ಅದಕ್ಕಾಗಿ ಮನೋವೈದ್ಯರ ಬಳಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.

545 ಪಿಎಸ್‌ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್‌ಪಿ ಹಾಗೂ ಎಫ್‌ ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ. ಬಂಧನಕ್ಕೆ ಒಳಗಾದ ಆರೋಪಿಗಳ ವಿಚಾರಣೆ ವೇಳೆ ಕೆಲವರು ಅಮೃತ್‌ ಪೌಲ್‌ ಹೆಸರನ್ನು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಮೃತ್‌ ಪೌಲ್‌ ಅವರನ್ನು ಬಂಧಿಸಲಾಗಿದೆ.



Join Whatsapp