SSLC, PUC  ಪರೀಕ್ಷಾ ಮಂಡಳಿ ವಿಲೀನ; ರಾಜ್ಯ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌

Prasthutha|

ಬೆಂಗಳೂರು: ವಿಧಾನಸಭೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದ್ದು, SSLC, PUC  ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

- Advertisement -

ಹೆಚ್ಚುವರಿ ಸಿಬ್ಬಂದಿ ನೇಮಕ ಸೇರಿದಂತೆ ಹಲವು ಅನಗತ್ಯ ಖರ್ಚುಗಳಿಗೆ ಬ್ರೇಕ್ ಹಾಕಲು SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ.

SSLC ಹಾಗೂ PUC  ಪರೀಕ್ಷಾ ಮಂಡಳಿಗಳನ್ನು ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನ ಜಾರಿಗೆ ತರಲು ನಿರ್ಧರಿಸಲಾಗಿದೆ.

- Advertisement -

SC/ST, BPL ಕಾರ್ಡ್‌ದಾರರಿಗೆ 75 ಯುನಿಟ್‌ ತನಕ ಉಚಿತ ವಿದ್ಯುತ್‌ ನೀಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿಯಲ್ಲಿ ಸಕ್ರಮ ಮಾಡಲು ಕೂಡ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ಮೂಲಕ ಹೊರ ಗುತ್ತಿಗೆ ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ.

Join Whatsapp