ಬೆಂಗಳೂರು: ಡಿಸೆಂಬರ್ 31ರಂದು ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್ಗೆ ನಿರ್ಧಾರ ಮಾಡಲಾಗಿದೆ. ಎಂಇಎಸ್ ಪುಂಡಾಟಿಕೆ ಹಿನ್ನೆಲೆಯಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ನಿರ್ಧಾರ ಮಾಡಿವೆ. ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗುತ್ತದೆ.
ರಾಜ್ಯ ಸರ್ಕಾರ ಎಂಇಎಸ್ ಪುಂಡರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ಬಗ್ಗೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿಂದು ಮಹತ್ವದ ಸಭೆ ನಡೆಯಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬೆಳಗ್ಗೆ 11.30ಕ್ಕೆ ಸಭೆ ನಡೆಯಲಿದ್ದು ವಿವಿಧ ಸಂಘಟನೆಗಳನ್ನು ಸಭೆಗೆ ಆಹ್ವಾನಿಸಲಾಗಿದೆ.
ಸುಮಾರು 35 ಸಂಘಟನೆಗಳಿಂದ ಬಂದ್‌ಗೆ ಬೆಂಬಲ ನೀಡಿದ್ದು . ಲಾರಿ ಮಾಲೀಕರ ಸಂಘ, ಆಟೋ ಚಾಲಕರು, ಟ್ಯಾಕ್ಸಿ ಮಾಲೀಕರು, ಹೋಟೆಲ್ ಮಾಲೀಕರು, ಶಿಕ್ಷಣ ಸಂಸ್ಥೆ, ದಲಿತ ಸಂಘರ್ಷ ಸಮಿತಿ, ಕೈಗಾರಿಕಾ, ಬೀದಿಬದಿ ವ್ಯಾಪರಿಗಳು, ಸಾರಿಗೆ ನೌಕರರು, ಸಿನಿಮಾ, ಅಂಗಡಿ ಮಾಲೀಕರು, ಗಾರ್ಮೆಂಟ್ಸ್ ನೌಕರರು, ಸರ್ಕಾರಿ ನೌಕರರು, ಅಖಿಲ ಭಾರತ ಚಾಲಕರ ಸಂಘ, ಕಟ್ಟಡ ಕಾರ್ಮಿಕರ ಸಂಘ ಮುಂತಾದ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ.