ಶರದ್ ಪವಾರ್ ಎದುರು ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್ ಪುಂಡರು

Prasthutha|

ಬೆಳಗಾವಿ: ಎಂಇಎಸ್ ಪುಂಡರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಎದುರೇ ನಾಡದ್ರೋಹಿ ಘೋಷಣೆ ಕೂಗಿ ಪುಂಡಾಟಿಕೆ ಪ್ರದರ್ಶಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

- Advertisement -


ಬೆಳಗಾವಿಯ ಮರಾಠಾ ಬ್ಯಾಂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಶರದ್ ಪವಾರ್ ಭಾಷಣ ಶುರುವಾಗುತ್ತಿದ್ದಂತೆ ಎಂಇಎಸ್ ಪುಂಡರು ನಾಡದ್ರೋಹ ಘೋಷಣೆ ಕೂಗಿದ್ದಾರೆ. ಮರಾಠ ಕೋ ಆಪರೇಟಿವ್ ಬ್ಯಾಂಕ್ ಅಮೃತ ಮಹೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿರುವ ಶರದ್ ಪವಾರ್, ಎಂಇಎಸ್ ಪುಂಡರ ಪೂರ್ವನಿಯೋಜಿತ ಘೋಷಣೆಗಳಿಂದ ತಬ್ಬಿಬ್ಬಾದರು.


ಶರದ್ ಪವಾರ್ ಭಾಷಣ ಶುರು ಮಾಡುತ್ತಿದ್ದಂತೆ ನಾಡದ್ರೋಹಿ ಎಂಇಎಸ್ ಪುಂಡರು,ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಸೇರಬೇಕು ಎಂದು ಘೋಷಣೆ ಕೂಗಿದರು.ಸಭೆಯಲ್ಲಿ ಭಾಗಿಯಾಗಿದ್ದ ಕೆಲವು ಎಂಇಎಸ್ ಪುಂಡರು ಪುಂಡಾಟಿಕೆ ಪ್ರದರ್ಶಿಸಿದರು.

Join Whatsapp