ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ ಮೆಟಾ

Prasthutha|

ವಾಷಿಂಗ್ಟನ್: ವಿಶ್ವದ ಅತಿ ದೊಡ್ಡ ಸಾಮಾಜಿಕ ನೆಟ್ ವರ್ಕಿಂಗ್ ಕಂಪನಿಯಾಗಿರುವ ಮೆಟಾ ಮತ್ತೆ ತನ್ನ ಉದ್ಯೋಗಿಗಳನ್ನು ಕಡಿತಗೊಳಿಸಲು ಯೋಜಿಸಿದೆ. ಈ ವಾರದಲ್ಲಿ ಮೆಟಾ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಲಿದೆ ಎಂದು ವರದಿಯಾಗಿದೆ.

- Advertisement -

ಫೇಸ್ ಬುಕ್ ಹಾಗೂ ಇನ್ ಸ್ಟಾಗ್ರಾಮ್ ನ ಮಾತೃ ಕಂಪನಿಯಾಗಿರುವ ಮೆಟಾ ಕಳೆದ ವರ್ಷ ನವೆಂಬರ್ ನಲ್ಲಿ ಸುಮಾರು ಶೇ.13ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಸುಮಾರು 11,000 ಉದ್ಯೋಗಿಗಳನ್ನು ಕಂಪನಿ ಮೊದಲ ಬಾರಿಗೆ ವಜಾಗೊಳಿಸಿತ್ತು. ಇದೀಗ ಮತ್ತೆ ಉದ್ಯೋಗಿಗಳನ್ನು ಕಡಿತಗೊಳಿಸಲು ಕಂಪನಿ ಯೋಜಿಸಿದ್ದು, ಇದು ಸಾವಿರಾರು ಉದ್ಯೋಗಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

Join Whatsapp