ಎನ್ ಇಪಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ನಿಂದ ವಿಧಾನಸೌಧ ಮುತ್ತಿಗೆ: ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್

Prasthutha|

ಬೆಂಗಳೂರು: ನೂತನ ಶಿಕ್ಷಣ ನೀತಿ-ಎನ್ ಇಪಿಯನ್ನು ವಿರೋಧಿಸಿ ಬೆಂಗಳೂರಿನಲ್ಲಿ ಮಂಗಳವಾರ ವಿಧಾನಸೌಧ ಮುತ್ತಿಗೆ ಹಮ್ಮಿಕೊಂಡಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.


ಮೈಸೂರು ಬ್ಯಾಂಕ್ ನಿಂದ ವಿಧಾನಸೌಧಕ್ಕೆ ಜಾಥಾ ಹೊರಟಿದ್ದ ನೂರಾರು ವಿದ್ಯಾರ್ಥಿಗಳನ್ನು ಮಾರ್ಗಮಧ್ಯೆ ತಡೆದ ಪೊಲೀಸರು ವಶಕ್ಕೆ ಪಡೆದು ಬಂಧಿಸಿದರು. ಈ ವೇಳೆ ಕೆಲವು ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಬೀಸಿದರು. ಇದರಿಂದ ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪ್ರತಿಭಟನಕಾರರನ್ನು ವಶಕ್ಕೆ ಪಡೆದ ಪೊಲೀಸರು ಬಿಎಂಟಿಸಿ ಬಸ್ ಗಳಲ್ಲಿ ಕರೆದೊಯ್ದರು.

- Advertisement -


ಇದಕ್ಕೂ ಮೊದಲು ಸಿಎಫ್ಐ ರಾಜ್ಯಾಧ್ಯಕ್ಷ ಅಥಾವುಲ್ಲಾ ಪುಂಜಲ್ ಕಟ್ಟೆ ಮಾತನಾಡಿ, ರಾಜ್ಯ ಸರ್ಕಾರ ತರಾತುರಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಮುಂದಾಗಿದೆ. ಇದರ ಹಿಂದೆ ಹಿಡನ್ ಅಜೆಂಡಾ ಇದೆ. ಯಾವುದೇ ಕಾರಣಕ್ಕೂ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು.

- Advertisement -