ಬಿಜೆಪಿಗೆ ಸೇರಲಿರುವ ‘ಮೆಟ್ರೋ ಮ್ಯಾನ್’

Prasthutha|

- Advertisement -

ಹೊಸದಿಲ್ಲಿ : ‘ಮೆಟ್ರೊ ಮ್ಯಾನ್’ ಎಂದು ಖ್ಯಾತಿ ಪಡೆದಿರುವ ದೆಹಲಿ ಮೆಟ್ರೊ ಮಾಜಿ ಮುಖ್ಯಸ್ಥ ಇ ಶ್ರೀಧರನ್ ಅವರು ಬಿಜೆಪಿಗೆ ಸೇರುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಬರುವ ಕೇರಳ ವಿಧಾನಸಭೆಗೆ ಚುನಾವಣೆಯಲ್ಲಿ ಶ್ರೀಧರನ್ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

ಕೇರಳದಲ್ಲಿ ಬಿಜೆಪಿ ಹಲವರಿಗೆ ಗಾಳ ಹಾಕಿದೆ. ಮುಂದಿನ ವಾರ ಕೇರಳದಲ್ಲಿ ಬಿಜೆಪಿ ಆಯೋಜಿಸಿರುವ ವಿಜಯ ಯಾತ್ರೆಯಲ್ಲಿ ಶ್ರೀಧರನ್ ಅವರು ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ.

- Advertisement -

88 ವರ್ಷದ ಶ್ರೀಧರನ್ ಅವರು ಮೂಲತಃ ಕೇರಳದ ಪಾಲಕ್ಕಾಡ್ ಜಿಲ್ಲೆಯವರಾಗಿದ್ದಾರೆ. ಭಾರತದ ದೆಹಲಿ ಮೆಟ್ರೋ ಸೇರಿದಂತೆ ಇತರ ನಗರಗಳ ಮೆಟ್ರೋ ಯೋಜನೆ ಹಾಗೂ ಮಹತ್ವದ ರೈಲು ಯೋಜನೆಗಳಲ್ಲಿ ಶ್ರೀಧರನ್ ಪಾತ್ರವಿದೆ. ಎಂಜಿನಿಯರ್ ಆಗಿರುವ ಅವರನ್ನು ಮೆಟ್ರೊ ಮ್ಯಾನ್ ಎಂದು ಕರೆಯಲಾಗುತ್ತಿದೆ.

Join Whatsapp