ರಾಮನಗರ: ನಮ್ಮ ಮೆಟ್ರೋವನ್ನು ಬಿಡದಿವರೆಗೂ ವಿಸ್ತರಣೆ ಮಾಡಲು ಸರ್ವೇ ಮಾಡಿಸುತ್ತಿದ್ದು, ಈ ವಿಚಾರವಾಗಿ ಸಮಗ್ರ ಯೋಜನಾ ವರದಿ ಸಿದ್ಧಪಡಿಸಲು ಸೂಚಿಸಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬಿಡದಿಯ ಟೊಯೋಟಾ-ಕಿರ್ಲೋಸ್ಕರ್ ಸಂಸ್ಥೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ತರಬೇತಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಜನರು ಕೆಲಸ ಮಾಡುತ್ತಿದ್ದಾರೆ. ಇವರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಲು ಮೆಟ್ರೋ ಯೋಜನೆ ಇಲ್ಲಿಯ ತನಕ ವಿಸ್ತರಿಸುವಂತೆ ಶಾಸಕರು, ಸಂಸದರು ಮನವಿ ಸಲ್ಲಿಸಿದ್ದರು. ಹೀಗಾಗಿ ಬಿಎಂಆರ್ಸಿಎಲ್ ಗೆ ಯೋಜನಾ ವರದಿ ಸಿದ್ದಪಡಿಸಲು ತಿಳಿಸಿದ್ದೇನೆ ಎಂದರು.