ಮೈಕ್ರೊಸಾಫ್ಟ್‌ ಅಧ್ಯಕ್ಷರಾಗಿ ಭಾರತೀಯ ಮೂಲದ ಸತ್ಯ ನಾದೆಲ್ಲಾ ನೇಮಕ

Prasthutha: June 17, 2021

ವಾಷಿಂಗ್ಟನ್‌ : ಜಗದ್ವಿಖ್ಯಾತ ಸಾಫ್ಟ್‌ ವೇರ್‌ ಸಂಸ್ಥೆ ಮೈಕ್ರೊಸಾಫ್ಟ್‌ ಕಂಪೆನಿಯ ಸಿಇಒ ಆಗಿದ್ದ ಭಾರತೀಯ ಮೂಲದ ಸತ್ಯ ನಾದೆಲ್ಲಾ ಅವರು ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಸತ್ಯ ನಾದೆಲ್ಲಾ ಅವರು ೨೦೧೪ರಲ್ಲಿ ಮೈಕ್ರೊಸಾಫ್ಟ್‌ ಕಂಪೆನಿಯ ಸಿಇಒ ಆಗಿ ನೇಮಕಗೊಂಡಿದ್ದರು. ಸ್ಟೀವ್‌ ಬಲ್ಮಾರ್‌ ರಿಂದ ಸತ್ಯ ನಾದೆಲ್ಲಾ ಅಧಿಕಾರ ಸ್ವೀಕರಿಸಿದ್ದರು. ಮೈಕ್ರೊಸಾಫ್ಟ್‌ ಕಂಪೆನಿಯ ಮಾಜಿ ಅಧ್ಯಕ್ಷ ಜಾನ್‌ ಥಾಂಪ್ಸನ್‌ ರನ್ನು ಪ್ರಮುಖ ಸ್ವತಂತ್ರ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಸತ್ಯ ನಾದೆಲ್ಲಾ ಸಿಇಒ ಆಗಿದ್ದ ವೇಳೆ ಲಿಂಕ್ಡ್‌ ಇನ್‌, ಜೆನಿಮ್ಯಾಕ್‌ ವ್ಯವಹಾರಗಳ ಹೆಚ್ಚುವರಿ ಜವಾಬ್ದಾರಿ ಹೊತ್ತಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ