ತ್ರಿಶೂರ್: ಇಂದು ಬೆಳಗ್ಗೆ ತ್ರಿಶೂರ್ ಹಾಗೂ ಪಾಲಕ್ಕಾಡ್ ಜಿಲ್ಲೆಯ ಕೆಲವು ಭಾಗಗಳಲ್ಲಿ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಲಘು ಭೂಕಂಪನ ಸಂಭವಿಸಿದೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ.
ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರದ ಪ್ರಕಾರ, ಈ ಪ್ರಾಂತ್ಯಗಳಲ್ಲಿ ಇಂದು ಬೆಳಗ್ಗೆ 8.15ರ ಸುಮಾರಿಗೆ 3.0 ತೀವ್ರತೆಯ ಭೂಕಂಪನವು ದಾಖಲಾಗಿದೆ. ಯಾವುದೇ ಹಾನಿ ಅಥವಾ ಗಾಯದ ವರದಿಗಳಾಗಿಲ್ಲ ಎಂದು ತ್ರಿಶೂರ್ ಜಿಲ್ಲಾಡಳಿತವು ತಿಳಿಸಿದೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.