ಕೀನ್ಯಾದಲ್ಲಿ ಮಿಲಿಟರಿ ಹೆಲಿಕಾಪ್ಟರ್ ಪತನ: ಸೇನಾ ಮುಖ್ಯಸ್ಥ ಸೇರಿ 10 ಮಂದಿ ಸಾವು

Prasthutha|

ನೈರೋಬಿ: ಗುರುವಾರ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಕೀನ್ಯಾ ರಕ್ಷಣಾ ಪಡೆಗಳ (CDF) ಮುಖ್ಯಸ್ಥ ಜನರಲ್ ಫ್ರಾನ್ಸಿಸ್ ಒಮೊಂಡಿ ಒಗೊಲ್ಲಾ ಸೇರಿ 10 ಮಂದಿ ಮಿಲಿಟರಿ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಕೀನ್ಯಾ ಅಧ್ಯಕ್ಷ ವಿಲಿಯಂ ರುಟೊ ತಿಳಿಸಿದ್ದಾರೆ.

- Advertisement -

ರಾಜಧಾನಿ ನೈರೋಬಿಯದಿಂದ ವಾಯುವ್ಯಕ್ಕೆ 400 ಕಿಲೋಮೀಟರ್ ದೂರದಲ್ಲಿರುವ ಎಲ್ಜಿಯೊ ಮರಕ್ವೆಟ್ ಕೌಂಟಿಯಲ್ಲಿ ಅಪಘಾತ ಸಂಭವಿಸಿದೆ. ಸ್ಥಳೀಯ ಕಾಲಮಾನ ಗುರುವಾರ ಮಧ್ಯಾಹ್ನ 2:20ಕ್ಕೆ ಹೆಲಿಕಾಪ್ಟರ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ದುರಂತದಲ್ಲಿ ಇಬ್ಬರು ಪಾರಾಗಿದ್ದಾರೆ ಎಂದು ವರದಿಯಾಗಿದೆ. ಮೃತ ಸೇನಾ ಮುಖ್ಯಸ್ಥ ಜನರಲ್ ಫ್ರಾನ್ಸಿಸ್ ಒಮೊಂಡಿ ಒಗೊಲ್ಲಾ ಈ ಹಿಂದೆ ಕೀನ್ಯಾ ವಾಯುಪಡೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.

ಉಪ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಅವರು ಮಿಲಿಟರಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು. ಕಳೆದ ವರ್ಷ ಅವರನ್ನು ರಕ್ಷಣಾ ಮುಖ್ಯಸ್ಥ ಜನರಲ್ ಆಗಿ ಬಡ್ತಿ ನೀಡಲಾಗಿತ್ತು. ರಕ್ಷಣಾ ಸಚಿವಾಲಯದ ಪ್ರೊಫೈಲ್ ಪ್ರಕಾರ ಒಗೊಲ್ಲಾ 1984 ರಲ್ಲಿ ಕೀನ್ಯಾ ರಕ್ಷಣಾ ಪಡೆಗಳಿಗೆ ಸೇರಿದ್ದರು. ಇದಲ್ಲದೇ ಅವರು ಯುನೈಟೆಡ್ ಸ್ಟೇಟ್ಸ್ ಏರ್ ಫೋರ್ಸ್ನಲ್ಲಿ ಫೈಟರ್ ಪೈಲಟ್ ಆಗಿ ಮತ್ತು ಕೀನ್ಯಾ ಏರ್ ಫೋರ್ಸ್ (ಕೆಎಎಫ್) ನಲ್ಲಿ ಬೋಧಕ ಪೈಲಟ್ ಆಗಿ ತರಬೇತಿ ಪಡೆದು,40 ವರ್ಷಗಳಿಂದ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಎಂದು ತಿಳಿದುಬಂದಿದೆ.

Join Whatsapp