ಟ್ರ್ಯಾಕ್ಟರ್’ಗೆ ಮಿನಿ ಬಸ್ ಡಿಕ್ಕಿ: ಐವರು ಸಾವು

Prasthutha|

ಕೃಷ್ಣಗಿರಿ: ಟ್ರ್ಯಾಕ್ಟರ್’ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 3 ತಿಂಗಳ ಮಗು ಸೇರಿದಂತೆ 5 ಮಂದಿ ಮೃತಪಟ್ಟಿರುವ ಘಟನೆ ಸೇಲಂ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

- Advertisement -


ಖಾಸಗಿ ಬಸ್ ರಾಷ್ಟ್ರೀಯ ಹೆದ್ದಾರಿ ಮೂಲಕ ಸೇಲಂನಿಂದ ಬೆಂಗಳೂರಿಗೆ ಬರುತ್ತಿತ್ತು. ಅದೇ ಸಮಯದಲ್ಲಿ ಧರ್ಮಪುರಿ ಜಿಲ್ಲೆಯ ಸೇವಾಲೂರು ಗ್ರಾಮದ 20 ಜನರು ಅಲೋವೆರಾ ಕೊಯ್ಲಿಗಾಗಿ ಆಂಧ್ರಕ್ಕೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ 20 ಮಂದಿ ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್ ಗೆ ಮಿನಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಟ್ರ್ಯಾಕ್ಟರ್ ಹೆದ್ದಾರಿಯಲ್ಲಿ ಪಲ್ಟಿಯಾಗಿ, ಇಬ್ಬರು ಮಹಿಳೆಯರು ಮತ್ತು 3 ತಿಂಗಳ ಮಗು ಸೇರಿದಂತೆ 5 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.



Join Whatsapp