ಬೆಂಗಳೂರು: ರಾಜ್ಯದಲ್ಲಿ ನಡೆದಿದ್ದ ಪಿಎಸ್ಐ ಅಕ್ರಮ ನೇಮಕಾತಿಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸಹೋದರ ಸತೀಶ್ಗೆ್ ಅಕ್ರಮದ ಲಿಂಕ್ ಇದೆ ಎಂದು ಕೆಪಿಸಿಸಿ ವಕ್ತಾರ ವಿ.ಎಸ್. ಉಗ್ರಪ್ಪ ಗಂಭೀರ ಆರೋಪ ಮಾಡಿದ್ದಾರೆ.ಇಂದು ಕೆಪಿಸಿಸಿ ಕಚೇರಿಯಲ್ಲಿ ಪಿಎಸ್ಐ ಅಕ್ರಮದ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಅವರು, ಸಚಿವ ಅಶ್ವಥ್ ನಾರಾಯಣ ಸುತ್ತ ಅನುಮಾನ ಮೂಡಿಸುತ್ತಿದ್ದು, ಮಾಗಡಿಯಲ್ಲಿ ಮೂರರಿಂದ ಐದು ಜನರಿಗೆ ರ್ಯಾಂಕ್ ಬಂದಿದೆ ಎಂದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು ಪ್ರಭಾವಿ ಸಚಿವರ ಸಹೋದರನನ್ನು ತನಿಖೆಗೆ ಕರೆದಿದ್ದಾರೆ. ಆದರೆ ಪ್ರಭಾವಿ ಸಚಿವರು ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ. ಪಿಎಸ್ಐ ನೇಮಕಾತಿಯಲ್ಲಿ ರಾಮನಗರದ ಐದು ಮಂದಿ ಆಯ್ಕೆ ಆಗಿದ್ದಾರೆ ಎಂದು ಉಗ್ರಪ್ಪ ಹೇಳಿದ್ದಾರೆ.
ವೃತ್ತಿಯಲ್ಲಿ ನಾನೊಬ್ಬ ವಕೀಲ, ಅಕ್ರಮದ ಬೆರಳು ಅಶ್ವಥ್ ನಾರಾಯಣ್ ಕಡೆಯೂ ತೋರಿಸುತ್ತಿದೆ. ಗಂಡಸ್ಥನದ ಬಗ್ಗೆ ಅಶ್ವಥ್ ನಾರಾಯಣ ಮಾತನಾಡುತ್ತಾರೆ, ನಿಮಗೆ ತಾಕತ್, ಧಮ್ ಇದ್ದರೆ ನ್ಯಾಯಾಂಗ ತನಿಖೆಗ ನಡೆಸಿ, ಹೈಕೋರ್ಟ್ ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ಒಪ್ಪಿಸಿ ಎಂದು ಸವಾಲನ್ನೆಸೆದರು. ನೈತಿಕತೆ ಇದ್ದರೆ ನೀವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಉಗ್ರಪ್ಪ ಆಗ್ರಹಿಸಿದ್ದಾರೆ