ಮಂಡ್ಯ: ‘ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಕರೆ ನೀಡಿರುವ ಆಘಾತಕಾರಿ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಸಾತನೂರು ಗ್ರಾಮದ ಹೊರವಲಯದ ಕಂಬದನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಮಂಗಳವಾರ ನಡೆದ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಟಿಪ್ಪು ಎಂದೊಡನೆ ಸಿದ್ದರಾಮಯ್ಯ ಅವರು ಬಂದುಬಿಡುತ್ತಾರೆ. ಉರಿಗೌಡ, ನಂಜೇಗೌಡ ಟಿಪ್ಪುವನ್ನು ಮೇಲಕ್ಕೆ ಕಳುಹಿಸಿದಂತೆ ಇವರನ್ನೂ ಕಳುಹಿಸಬೇಕು, ಹೊಡೆದುಹಾಕಬೇಕು’ ಎಂದು ಹೇಳಿದ್ದಾರೆ.
ಈ ಕುರಿತ ವಿಡಿಯೋ ವೈರಲಾಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
‘ಉರಿಗೌಡ ನಂಜೇಗೌಡ ಟಿಪ್ಪುವನ್ನು ಏನು ಮಾಡಿದರು? ಮೇಲಕ್ಕೆ ಕಳುಹಿಸಿದರು, ಹೊಡೆದು ಹಾಕಿದರು. ಅದೇ ರೀತಿ ಇವರನ್ನೂ ಹೊಡೆದು ಹಾಕಬೇಕು, ಮೇಲಕ್ಕೆ ಕಳುಹಿಸಬೇಕು’ ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.