ಸಚಿವರಿಂದಲೇ ಕೋವಿಡ್ ರೂಲ್ಸ್ ಬ್ರೇಕ್ | ಕುಟುಂಬ ಸಮೇತ ಈಶ್ವರಪ್ಪ ದೇವಾಲಯಕ್ಕೆ ಭೇಟಿ!

Prasthutha: June 11, 2021

ಶಿವಮೊಗ್ಗ : ಸಚಿವ ಕೆ. ಎಸ್ ಈಶ್ವರಪ್ಪ ಅವರು ತಮ್ಮ ಕುಟುಂಬದವರ ಜೊತೆ ದೇವಾಲಯಕ್ಕೆ ಭೇಟಿ ನೀಡಿ ಲಾಕ್ ಡೌನ್ ನಿಯಮಾವಳಿ ಉಲ್ಲಂಘಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಭಾ ನಗರದದಲ್ಲಿ ನಡೆದಿದೆ.

ವಿನೋಭನಗರದ ಗಣಪತಿ ದೇವಾಲಯಕ್ಕೆ ಜೂನ್ 10 ರಂದು ಭೇಟಿ ನೀಡಿದ್ದಾರೆ ಎಂದು ಹೇಳಲಾಗಿದ್ದು, ಸಚಿವರು ದೇವಾಲಯಕ್ಕೆ ಭೇಟಿ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈಶ್ವರಪ್ಪ ಸೇರಿದಂತೆ ಕುಟುಂಬದ 14 ಮಂದಿ ಸದಸ್ಯರು ದೇವಾಲಯಕ್ಕೆ ಭೇಟಿ ನೀಡಿ ಕೊರೊನಾ ನಿಯಮ ಉಲ್ಲಂಘಿಸಿದ್ದಾರೆ. ಅಲ್ಲದೇ ಈ ದೇವಸ್ಥಾನ ಶಿವಮೊಗ್ಗದ ಶುಭ ಮಂಗಳ ಸಮುದಾಯ ಭವನದ ಒಳಾಂಗಣದಲ್ಲಿದ್ದು, ವಾರಗಳ ಹಿಂದೆಯಷ್ಟೇ ಈ ಸಮುದಾಯ ಭವನವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಬದಲಾವಣೆ ಮಾಡಲಾಗಿತ್ತು, ಸರ್ಕಾರದ ಮಾರ್ಗಸೂಚಿ ಪ್ರಕಾರ ದೇವಾಲಯದಲ್ಲಿ ಪೂಜೆ ಮಾಡುವ ಅರ್ಚಕರಿಗೆ ಮಾತ್ರ ಸದ್ಯ ದೇವಾಲಯ ಪ್ರವೇಶಕ್ಕೆ ಅವಕಾಶವಿದೆ, ಸಚಿವ ಕೆ. ಎಸ್ ಈಶ್ವರಪ್ಪ ಅವರು ತಮ್ಮ ಕುಟುಂಬದವರ ಜೊತೆ ದೇವಾಲಯಕ್ಕೆ ಭೇಟಿ ನೀಡಿ ಲಾಕ್ ಡೌನ್ ನಿಯಮಾವಳಿ ಮುರಿದಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ