Home ಟಾಪ್ ಸುದ್ದಿಗಳು ಮುಡಾ ಸೈಟ್ ಪಡೆದ ಬಿಜೆಪಿ-ಜೆಡಿಎಸ್ ನಾಯಕರ ಪಟ್ಟಿ ಬಿಡುಗಡೆ ಮಾಡಿದ ಸಚಿವ ಬೈರತಿ ಸುರೇಶ್

ಮುಡಾ ಸೈಟ್ ಪಡೆದ ಬಿಜೆಪಿ-ಜೆಡಿಎಸ್ ನಾಯಕರ ಪಟ್ಟಿ ಬಿಡುಗಡೆ ಮಾಡಿದ ಸಚಿವ ಬೈರತಿ ಸುರೇಶ್

ಬೆಂಗಳೂರು: ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸಿವೆ.


ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಮುಡಾದಲ್ಲಿ ಬದಲಿ ನಿವೇಶನ ಪಡೆದುಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಇನ್ನು ಮುಡಾ ಬದಲಿ ಸೈಟ್ ಪಡೆದುಕೊಂಡವರ ಪಟ್ಟಿಯಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಹೆಸರು ಸಹ ಇದ್ದು, ಈ ಪ್ರಕರಣ ಮತ್ತಷ್ಟು ಸಂಚಲನಕ್ಕೆ ಕಾರಣವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬೈರತಿ ಸುರೇಶ್, ಸ್ಪೀಕರ್ ಅವಕಾಶ ನೀಡಿದ್ದರೆ ಬಿಜೆಪಿಯವರ ಬಂಡವಾಳ ಬಿಚ್ಚಿಡ್ತಿದ್ದೆ. ಹಲವಾರು ಮಠಗಳಿಗೂ ನಿವೇಶನ ಹಂಚಿಕೆಯಾಗಿದೆ.

ಜಿ.ಟಿ.ದೇವೇಗೌಡ, ಸಿ.ಎನ್.ಮಂಜೇಗೌಡ, ಹೆಚ್.ವಿಶ್ವನಾಥ್. ಸಾ.ರಾ.ಮಹೇಶ್, ಹೆಚ್.ಡಿ.ಕುಮಾರಸ್ವಾಮಿಗೂ ನಿವೇಶನ ಹಂಚಿಕೆ ಇವರಿಗೆಲ್ಲರಿಗೂ ಬದಲಿ ನಿವೇಶನ ಹಂಚಿಕೆಯಾಗಿದೆ. ತನಿಖಾ ಆಯೋಗದ ಮುಂದೆ ಅಕ್ರಮವೋ ಸಕ್ರಮವೋ ತಿಳಿಯುತ್ತೆ ಎಂದು ಹೇಳಿದರು.

Join Whatsapp
Exit mobile version