ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪದಡಿ ನಟ, ನಿರ್ದೇಶಕ ಉಪೇಂದ್ರ ವಿರುದ್ಧ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ. ಉಪೇಂದ್ರ ನಾಲಗೆಯಲ್ಲಿ ಬಂದ ಈ ಪದದ ವಿರುದ್ಧ ಈಗ ದಲಿತ ಸಮುದಾಯಗಳು ಸಿಡಿದೆದ್ದಿವೆ. ಇನ್ನು ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದು, ಉಪೇಂದ್ರ ಅವರು ಒಬ್ಬ ಖ್ಯಾತ ನಟ, ನಿರ್ಮಾಪಕ ಮತ್ತು ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಮೂಲಕ ಸಾರ್ವಜನಿಕ ಜೀವನದಲ್ಲಿ ಇರಲು ಬಯಸುತ್ತಿರುವ ವ್ಯಕ್ತಿ. ಆದರೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅವರು ಜಾತಿ ಹೆಸರನ್ನು ಕರೆಯುತ್ತಿರುವುದನ್ನು ನೋಡಿದರೆ ಇದು ಸಮುದಾಯಕ್ಕೆ ಮಾತ್ರವಲ್ಲದೇ ಸಂವಿಧಾನಕ್ಕೂ ಮಾಡಿದ ಅಪಚಾರ ಆಗಿದೆ ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಡತನವೇ ಬೇರೆ ಜಾತಿ ಆಧಾರಿತವಾದ ಸಾಮಾಜಿಕ ಅಸಮಾನತೆಯೇ ಬೇರೆ ಎಂಬ ಸಂಗತಿಯನ್ನು ಅವರು ಅರಿಯಬೇಕು, ಹೀಗಾಗಿ ಸಾರ್ವಜನಿಕ ಜೀವನದಲ್ಲಿ ಇರುವ ಅವರು ಈ ದೇಶದ ಅಸಮಾನತೆ ಮತ್ತು ನೋವಿನ ಚರಿತ್ರೆಯನ್ನೇ ತಿಳಿಯದಿದ್ದ ಮೇಲೆ ಇವರ ಸಮಾಜ ಬದಲಾಯಿಸುವಂತಹ ಮಾತುಗಳಿಗೆ ಯಾವ ಅರ್ಥವಿಲ್ಲ ಎಂದು ಸಹಜವಾಗಿ ಅನಿಸುತ್ತಿದೆ ಎಂದಿದ್ದಾರೆ. ಈಗಾಗಲೇ ಬಹುತೇಕ ದಲಿತ ಸಂಘಟನೆಗಳು ಈ ಕುರಿತಂತೆ ಮನವಿ ಸಲ್ಲಿಸುತ್ತಿರುವ ಕಾರಣ ಶೋಷಿತ ಸಮುದಾಯಗಳನ್ನು Taken for granted ಆಗಿ ಉಲ್ಲೇಖಿಸುವ ಈ ಉಪೇಂದ್ರರ ಪ್ರವೃತ್ತಿಯನ್ನು ನಿಲ್ಲಿಸಲು ಮತ್ತು ಸಮುದಾಯಗಳಿಗೆ ಸಂವಿಧಾನದಲ್ಲೇ ಇರುವ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.
ಈಗಾಗಲೇ ಬಹುತೇಕ ದಲಿತ ಸಂಘಟನೆಗಳು ಈ ಕುರಿತಂತೆ ಮನವಿ ಸಲ್ಲಿಸುತ್ತಿರುವ ಕಾರಣ ಶೋಷಿತ ಸಮುದಾಯಗಳನ್ನು Taken for granted ಆಗಿ ಉಲ್ಲೇಖಿಸುವ ಈ ಉಪೇಂದ್ರರ ಪ್ರವೃತ್ತಿಯನ್ನು ನಿಲ್ಲಿಸಲು ಮತ್ತು ಸಮುದಾಯಗಳಿಗೆ ಸಂವಿಧಾನದಲ್ಲೇ ಇರುವ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲಾಗುವುದು
— Dr H C Mahadevappa(Buddha Basava Ambedkar Parivar) (@CMahadevappa) August 14, 2023
4/4