ಶಾಸಕ ಸ್ಥಾನದಿಂದ ಮುನಿರತ್ನರನ್ನು ಅಮಾನತುಗೊಳಿಸುವಂತೆ ಸ್ಪೀಕರ್‌ಗೆ ಸಚಿವ ಎಚ್.ಕೆ.ಪಾಟೀಲ್ ಪತ್ರ

Prasthutha|

- Advertisement -

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದ ನಂತರ ಮಹಿಳೆ ಮೇಲೆ ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ರಚಿಸಿದೆ.

ಮತ್ತೊಂದೆಡೆ ಶಾಸಕ ಸ್ಥಾನದಿಂದ ಮುನಿರತ್ನ ಅವರನ್ನು ಅಮಾನತುಗೊಳಿಸಬೇಕು ಎಂದು ಕಾನೂನು ಸಚಿವ ಎಚ್​ಕೆ ಪಾಟೀಲ್ ಅವರು ಸ್ಪೀಕರ್​ ಯುಟಿ ಖಾದರ್ ಅವರಿ​​ಗೆ ಪತ್ರ ಬರೆದಿದ್ದಾರೆ.

- Advertisement -

ಎಚ್​ಕೆ ಪಾಟೀಲ್ ಅವರು ಸ್ಪೀಕರ್ ಗೆ ಬರೆದ ಪತ್ರದಲ್ಲಿ, ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನೈತಿಕ ಅಧ:ಪತನಕ್ಕೆ ಕಾರಣವಾದ ಅತ್ಯಂತ ಹೇಯವಾದ, ಅಸಭ್ಯವಾದ ಭಾಷೆ ಬಳಸಿ ಕೀಳು ಅಭಿರುಚಿ ಪ್ರದರ್ಶಿಸಿದ ಈ ಘಟನೆ ಕ್ಷಮಾರ್ಹವಲ್ಲ . ವಿಧಾನಸಭೆಯ ಸದಸ್ಯರಿಗೆ ನೈತಿಕ ಮೌಲ್ಯಗಳ ನಿಯಂತ್ರಣ ಹೇರುವ “ನೀತಿ-ನಿರೂಪಣಾ ಸಮಿತಿ” (Ethics Committee of State Legislature) ಎಂದೆಂದಿಗಿಂತಲೂ ಇಂದು ರಚಿಸಬೇಕಾದ ಅತೀ ಅವಶ್ಯಕತೆ ಇದೆ. ಸದನದ ಒಳಗೆ ಹಾಗೂ ಹೊರಗೆ ಅಸಭ್ಯವಾಗಿ ವರ್ತಿಸುವ ಸದಸ್ಯರ ವರ್ತನೆಯನ್ನು ಮೌಲ್ಯಗಳನ್ನು ಗಾಳಿಗೆ ತೂರುವ ನಡತೆಗಳನ್ನು ನಿಯಂತ್ರಿಸುವ ನಿಯಮಗಳನ್ನು ತಕ್ಷಣ ರಚಿಸಬೇಕು. ಸಂವಿಧಾನದತ್ತವಾಗಿ ಸಭಾಧ್ಯಕ್ಷರಿಗೆ ಪ್ರದತ್ತವಾಗಿರುವ ಪರಾಮಾಧಿಕಾರವನ್ನು ಚಲಾಯಿಸಿ ವಿಶೇಷ ಅಪರೂಪದ ಕ್ರಮ ಕೈಗೊಳ್ಳುವ ಮೂಲಕ ವಿಧಾನಸಭೆ ಸದಸ್ಯರಾದ ಕೆ.ಮುನಿರತ್ನ ಅವರನ್ನು ವಿಧಾನಸಭೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ



Join Whatsapp