SSLC, PUC ಪರೀಕ್ಷೆಗೆ ಅಗತ್ಯ ಸಿದ್ಧತೆ, ಭದ್ರತೆ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವರ ಸೂಚನೆ

Prasthutha|

ಬೆಂಗಳೂರು: ರಾಜ್ಯಾದ್ಯಂತ ನಡೆಯಲಿರುವ ಪ್ರಸಕ್ತ ಸಾಲಿನ SSLC ಹಾಗೂ PUC ಪರೀಕ್ಷೆಗಳನ್ನು ಸುರಕ್ಷಿತವಾಗಿ ಹಾಗೂ ಸುಲಲಿತವಾಗಿ ನಡೆಸುವ ಸಂಬಂಧ ಇಂದು ರಾಜ್ಯ ಪ್ರಾಥಮಿಕ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

- Advertisement -


ಶಿಕ್ಷಣ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


ಈ ಬಾರಿ PUC ಪರೀಕ್ಷೆಗಳು ರಾಜ್ಯಾದ್ಯಂತ ಒಟ್ಟು 1907 ಕೇಂದ್ರಗಳಲ್ಲಿ ನಡೆಯುತ್ತಿದ್ದು, ಸುಮಾರು 3300 ಕೇಂದ್ರಗಳಲ್ಲಿ SSLC ಪರೀಕ್ಷೆಗಳು ನಡೆಯಲಿವೆ. ಅಧಿಕಾರಿಗಳು ಪರೀಕ್ಷೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಈಗಿನಿಂದಲೇ ಆರಂಭಿಸಬೇಕು. ಯಾವುದೇ ಕಾರಣಕ್ಕೂ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಸಚಿವದ್ವಯರು ಅಧಿಕಾರಿಗಳಿಗೆ ಸೂಚನೆ ನೀಡಿದರು.



Join Whatsapp