Home ಕರಾವಳಿ ಮಂಗಳೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವ ಕೃಷ್ಣ ಭೈರೇಗೌಡ

ಮಂಗಳೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವ ಕೃಷ್ಣ ಭೈರೇಗೌಡ

ಮಂಗಳೂರು: ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಂಗಳೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದರು.

ಸಾರ್ವಜನಿಕರ ದೂರು ಹಿನ್ನೆಲೆ ತಾಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದ ಕೃಷ್ಣ ಭೈರೇಗೌಡ, ರೆಕಾರ್ಡ್ ರೂಮ್, ಸಬ್ ರಿಜಿಸ್ಟ್ರಾರ್ ಕಚೇರಿ, ಸರ್ವೆ ಕಚೇರಿ ಪರಿಶೀಲನೆ ನಡೆಸಿದರು.

ರೆಕಾರ್ಡ್ ರೂಮ್​ನಲ್ಲಿ ದಾಖಲೆ ಡಿಜಿಟಲೀಕರಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಕಂದಾಯ ಸಚಿವರು, ಡಿಜಿಟಲೀಕರಣ ಆಗದ ದಾಖಲೆಗಳ ಶೀಘ್ರ ಡಿಜಿಟಲೀಕರಣಕ್ಕೆ ಸೂಚನೆ ನೀಡಿದರು. ಬಳಿಕ ಭೂಮಾಪನ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದ ಸಚಿವರು, ನೋಂದಣಿ ವಿಳಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

Join Whatsapp
Exit mobile version