ಅಪಘಾತದಿಂದ ಗಾಯಗೊಂಡಿದ್ದ ವಿದ್ಯಾರ್ಥಿಗೆ ನೆರವಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಿಥುನ್ ರೈ

Prasthutha|

ಕಾಪು: ವಾಹನ ಢಿಕ್ಕಿ ಹೊಡೆದು ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗುವ ಮೂಲಕ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ ಮಾನವೀಯತೆ ಮೆರೆದ ಘಟನೆ ನಡೆದಿದೆ.

- Advertisement -

ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕ್ರಾಸ್ ಬಳಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ರಸ್ತೆಯಲ್ಲೆ ಬಿದ್ದು ನರಳುತ್ತಿದ್ದನು. ದಾರಿ ಮಧ್ಯೆ ವಿದ್ಯಾರ್ಥಿಯ ನರಳಾಟವನ್ನು ಕಂಡ ಸಚಿವೆ ಹೆಬ್ಬಾಳ್ಕರ್ ಮತ್ತು ಮಿಥುನ್ ರೈ ತಕ್ಷಣವೇ ಕಾರನ್ನು ನಿಲ್ಲಿಸಿ, ಬಳಿಕ ಆಟೋವೊಂದರಲ್ಲಿ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸಿ ಆ ವಿದ್ಯಾರ್ಥಿಯ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಸಂಪೂರ್ಣವಾಗಿ ತಾವೇ ಭರಿಸಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಮಿಥುನ್ ರೈ ಅವರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಉಚ್ಚಿಲ ಪಣಿಯೂರಿನ ಬೆಳಪು ವ್ಯವಸಾಯ ಸಹಕಾರ ಸಂಘದ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ಸಹಕಾರಿ ಮಹಲ್‌ನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಸಚಿವರು, ಉಡುಪಿ ಕಡೆ ಬರುತ್ತಿದ್ದರು.