ರಾಮಕೃಷ್ಣರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ತಡೆ: ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

Prasthutha|

ಉಡುಪಿ: ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಿ.ಜಿ. ರಾಮಕೃಷ್ಣ ಅವರಿಗೆ ನೀಡಲಾಗಿದ್ದ ರಾಜ್ಯಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಯನ್ನು ಶಾಲಾ ಶಿಕ್ಷಣ ಇಲಾಖೆ ತಡೆಹಿಡಿದಿದೆ.

- Advertisement -


ಈ ಬಗ್ಗೆ ಖುದ್ದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದು, ಈ ಹಿಂದಿನ ಸರ್ಕಾರ ಆದೇಶ ಮಾಡಿದಾಗ ಪ್ರಿನ್ಸಿಪಾಲ್ ವರ್ತನೆ ಸರಿಯಿರಲಿಲ್ಲ. ಹೀಗಾಗಿ ಪ್ರಶಸ್ತಿ ತಡೆಹಿಡಿಯಲಾಗಿದೆ. ಪ್ರಶಸ್ತಿ ಕ್ಯಾನ್ಸಲ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ಈ ಹಿಂದಿನ ಸರ್ಕಾರ ಆದೇಶ ಮಾಡಿದಾಗ ಪ್ರಿನ್ಸಿಪಾಲ್ ವರ್ತನೆ ಸರಿಯಿರಲಿಲ್ಲ. ಹೀಗಾಗಿ ಪ್ರಶಸ್ತಿ ತಡೆಹಿಡಿಯಲಾಗಿದೆ, ಪ್ರಶಸ್ತಿ ರದ್ದು ಮಾಡಿಲ್ಲ. ವಿದ್ಯಾರ್ಥಿಗಳ ಜೊತೆ ಪ್ರಿನ್ಸಿಪಾಲ್ ರಾಮಕೃಷ್ಣ ವರ್ತನೆ ಸರಿಯಿರಲಿಲ್ಲ. ಈ ಬಗ್ಗೆ ಮತ್ತೆ ಪರಿಶೀಲನೆ ಮಾಡಿ ವರದಿ ನೀಡುತ್ತಾರೆ. ಆ ಭಾಗದಲ್ಲಿ ರಾಜಕಾರಣ ಮಾಡುತ್ತಾರೆ. ಅದು ಮಾಡೋದು ಬೇಡ ಎಂದು ಬಿಜೆಪಿಗೆ ಟಾಂಗ್ ಕೊಟ್ಟರು.

- Advertisement -

ಘಟನೆ ಏನು?

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ನಡೆದಿದ್ದ ಹಿಜಾಬ್‌ ಪ್ರಕಣದಲ್ಲಿ ರಾಮಕೃಷ್ಣ ಹೆಸರು ತಳಕು ಹಾಕಿಕೊಂಡಿತ್ತು. ಹಿಜಾಬ್‌ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರಾಗಿದ್ದ ರಾಮಕೃಷ್ಣ ಕಾಲೇಜು ಗೇಟ್‌ ಹೊರಗೆ ನಿಲ್ಲಿಸಿದ್ದರು. ಇದು ವಿವಾದದ ಸ್ವರೂಪ ಪಡೆದು, ಇತರೆ ಜಿಲ್ಲೆಗಳಿಗೂ ಹಬ್ಬಿತ್ತು. ಕೊನೆಗೆ ಬಿಜೆಪಿ ಸರ್ಕಾರ ಶಾಲಾ–ಕಾಲೇಜುಗಳ ಒಳಗೆ ಹಿಜಾಬ್‌ ಧರಿಸುವುದನ್ನು ನಿಷೇಧಿಸಿತ್ತು.

ಪ್ರಶಸ್ತಿ ಪಟ್ಟಿ ಪ್ರಕಟವಾದ ನಂತರ, ರಾಮಕೃಷ್ಣ ಅವರಿಗೆ ಪ್ರಶಸ್ತಿ ನೀಡಿದ್ದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. 



Join Whatsapp