ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪರಿಂದ ಅಧಿಕಾರಿಗಳಿಗೆ ಖಡಕ್ ಸೂಚನೆ

Prasthutha|

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗ ಜಿಲ್ಲೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ, ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

- Advertisement -

ಇಂದು ಸಾಗರ ಎಸಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದು, ಸಾಗರ ತಾಲ್ಲೂಕಿನ ಶಾಲೆಗಳಲ್ಲಿ ಮೂಲಸೌಕರ್ಯ ಒದಗಿಸಲು ಸೂಚಿಸಿದರು. ಶಾಲಾ ಕಟ್ಟಡ ದುರಸ್ತಿ, ಕುಡಿಯುವ ನೀರು ಪೂರೈಕೆ ಒತ್ತು ನೀಡಲು ಸಲಹೆ ನೀಡಿದರು.

- Advertisement -

ಅಲ್ಲದೇ ಇದೇ ವೇಳೆ, ತಾಲ್ಲೂಕಿನ 28 ಶಾಲೆಗಳ ಬಳಿ ಇರುವ ಮರಗಳ ತೆರವಿಗೆ
10 ದಿನಗಳ ಗಡವು ನೀಡಿದ ಸಚಿವ ಮಧು ಬಂಗಾರಪ್ಪ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ, ಸಾಗರ ಎಸಿ ಪಲ್ಲವಿ ಸಾತೇನಹಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.