Home ಟಾಪ್ ಸುದ್ದಿಗಳು ನಾರಾಯಣ ಗುರು ಈಡಿಗ ಅಭಿವೃದ್ಧಿ ನಿಗಮಕ್ಕೆ 500ಕೋಟಿ ರೂ ನೀಡಲು ಸಚಿವ ಮಧು ಬಂಗಾರಪ್ಪ ಮನವಿ

ನಾರಾಯಣ ಗುರು ಈಡಿಗ ಅಭಿವೃದ್ಧಿ ನಿಗಮಕ್ಕೆ 500ಕೋಟಿ ರೂ ನೀಡಲು ಸಚಿವ ಮಧು ಬಂಗಾರಪ್ಪ ಮನವಿ

ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂಪಾಯಿ ತೆಗೆದಿರಿಸುವಂತೆ ಮುಖ್ಯಮಂತ್ರಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ‌ಇಲಾಖೆ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದ್ದಾರೆ

ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮೂರು ಬೇಡಿಕೆಗಳನ್ನು ತಮ್ಮ ಗಮನಕ್ಕೆ ತಂದಿದ್ದೆ. ಅದರಲ್ಲಿ ಪ್ರಮುಖವಾಗಿ ಬ್ರಹ್ಮಶ್ರೀ ನಾರಾಯಣ ಗುರು ಈಡಿಗ ಅಭಿವೃದ್ಧಿ ನಿಗಮ, ನಾರಾಯಣ ಗುರು ಅಧ್ಯಯನ ಪೀಠ ಸ್ಥಾಪಿಸುವಂತೆ ಮನವಿ ಮಾಡಿದ್ದೆ. ಈ ಎರಡು ಬೇಡಿಕೆಗಳನ್ನು ಈಡೇರಿಸಿದ್ದರು. ಇದಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈಡಿಗ ಸಮಾಜದ ಅಭಿವೃದ್ಧಿಗಾಗಿ ಈಡಿಗ ಅಭಿವೃದ್ಧಿ ನಿಗಮಕ್ಕೆ 500ಕೋಟಿ ರೂಪಾಯಿ ನೀಡಬೇಕೆಂದು ಮನವಿ ಮಾಡಿದರು.

ನಾರಾಯಣ ಗುರು ಜಯಂತೋತ್ಸವ ಕಾರ್ಯಕ್ರಮವನ್ನು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಪ್ರಾರಂಭಿಸಲಾಯಿತು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅವಧಿಯಲ್ಲಿ ಅನೇಕ ಭಾಗ್ಯಗಳನ್ನು ಜಾರಿ ತಂದರು. ಅದರಂತೆ ಎಲ್ಲ ವರ್ಗದ ಬಡವರಿಗೆ ನಮ್ಮ ತಂದೆ ಮಾಜಿ ಸಿಎಂ ಬಂಗಾರಪ್ಪನವರಂತೆ ಉಚಿತ ವಿದ್ಯುತ್ ನೀಡಿದಿರಿ ಇದರಿಂದ ಎಲ್ಲ ವರ್ಗದ ಜನರಿಗೆ ಅನುಕೂಲ ವಾಗಲಿದೆ ಎಂದು ತಿಳಿಸಿದರು.

ಈಡಿಗ ಅಭಿವೃದ್ಧಿ ನಿಗಮ, ಭವನಕ್ಕೆ ಅನುದಾನ : ಸಿದ್ದರಾಮಯ್ಯ

ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಮತ್ತು ನಾರಾಯಣಗುರು ಭವನ ನಿರ್ಮಿಸಬೇಕು ಎನ್ನುವ ಸಮುದಾಯದ ಬೇಡಿಕೆಗೆ ಒಪ್ಪಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆಯಲ್ಲೇ ಎರಡು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.

ಸಮಾರಂಭದಲ್ಲಿ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಹೆಚ್.ಆರ್.ಗವಿಯಪ್ಪ, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಈಡಿಗ ಸಮಾಜದ ವಿಖ್ಯಾತನಂದ ಸ್ವಾಮಿ, ಈಡಿಗ ಸಮಾಜದ ಅಧ್ಯಕ್ಷ ತಿಮ್ಮೇಗೌಡ, ಈಡಿಗ ಸಮಾಜದ ನಿರ್ದೇಶಕರಾದ ಶಿವಕುಮಾರ್, ಹರಿಚರಣ್, ಮೋಹನ್ ದಾಸ್ ಸೇರಿದಂತೆ ಅನೇಕರು ಹಾಜರಿದ್ದರು.

Join Whatsapp
Exit mobile version