Home ಕರಾವಳಿ ಮೀನುಗಾರರ ಸಮಸ್ಯೆ: ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ ಕ್ಲಾಸ್

ಮೀನುಗಾರರ ಸಮಸ್ಯೆ: ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ ಕ್ಲಾಸ್

ಮಂಗಳೂರು: ಮೃತಪಟ್ಟ ಮೀನುಗಾರರಿಗೆ ಪರಿಹಾರ ವಿತರಣೆ ಸೇರಿದಂತೆ 20 ಪ್ರಕರಣಗಳು ಒಂದು ವರ್ಷದಿಂದ ಬಾಕಿ ಇದ್ದು, ರಾಜ್ಯ ಸರ್ಕಾರದಿಂದ ನೀಡಬೇಕಾದ ಪರಿಹಾರ ಮೊತ್ತವನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಮೀನುಗಾರಿಕಾ ಸಚಿವ ಮಾಂಕಾಳ ವೈದ್ಯ ಹೇಳಿದ್ದಾರೆ.


ಶುಕ್ರವಾರ ಮಂಗಳೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಡಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಈ ಮೂರು ಜಿಲ್ಲೆಗಳಿಗೆ ಒಟ್ಟು₹ 3.60 ಕೋಟಿ ಬಿಡುಗಡೆಗೆ ಬಾಕಿ ಇದೆ. ಹಿಂದಿನ ಬಿಜೆಪಿ ಸರ್ಕಾರ ಮೀನುಗಾರರನ್ನು ಸಂಪೂರ್ಣ ನಿರ್ಲಕ್ಷಿಸಿದೆ. ಹಿಂದಿನ ಬಾಕಿಯಲ್ಲಿ ಮೊದಲ ಹಂತದಲ್ಲಿ ₹1.60 ಕೋಟಿ ಬಿಡುಗಡೆಗೊಳಿಸಿ, ಆದ್ಯತೆ ಮೇರೆಗೆ ಪರಿಹಾರ ಹಣ ವಿತರಿಸಲಾಗುವುದು ಎಂದರು.

Join Whatsapp
Exit mobile version