ಡೆತ್ ನೋಟ್‌ನಲ್ಲಿ ಸಚಿವ ನಾಗೇಂದ್ರ ಹೆಸರು ಬರೆದಿಲ್ಲ, ಅವರ ವಿರುದ್ಧ ಕ್ರಮ ಇಲ್ಲ: ಪರಮೇಶ್ವರ್

Prasthutha|

ಶಿವಮೊಗ್ಗ: ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರ ತಲೆದಂಡ ಇಲ್ಲ. ಡೆತ್ ನೋಟ್ ನಲ್ಲಿ ನಿರ್ದಿಷ್ಟವಾಗಿ ಸಚಿವರ ಹೆಸರು ಬರೆದಿಲ್ಲ. ಹೀಗಾಗಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳಲು ಬರುವುದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

- Advertisement -

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಒಬ್ಬರ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್. ಈಶ್ವರಪ್ಪ ಅವರ ಹೆಸರು ಇತ್ತು. ಇಲ್ಲಿ ಸಚಿವರ ಹೆಸರಿಲ್ಲ. ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧವೂ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಎಲ್ಲಾ ಸಂಸ್ಥೆಗಳು ಸರ್ಕಾರದ ಅಧೀನದಲ್ಲಿಯೇ ಕೆಲಸ ಮಾಡುತ್ತವೆ. ತನಿಖಾ ಸಂಸ್ಥೆಗಳನ್ನು ಎಲ್ಲರೂ ನಂಬಬೇಕು. ಸಿಬಿಐ ಮೇಲೆಯೂ ಪ್ರಭಾವ ಬೀರಬಹುದು ಎಂದು ನಾನು ಹೇಳುತ್ತೇನೆ. ತನಿಖೆ ಸಿಬಿಐಗೆ ವಹಿಸಬೇಕೆ, ಬೇಡವೇ ಎಂದು ಸರ್ಕಾರ ನಿರ್ಧರಿಸುತ್ತದೆ. ಬಿಜೆಪಿಯವರನ್ನು ಕೇಳಿ ನಾವು ಅಧಿಕಾರ ನಡೆಸಬೇಕಾ ಎಂದು ಪ್ರಶ್ನಿಸಿದ್ದಾರೆ.

- Advertisement -

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿವೆ.

ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ನೀಡಲ್ಲ ಎಂದು ಸಚಿವ ನಾಗೇಂದ್ರ ಹೇಳಿದ್ದಾರೆ. ನನಗೂ ಈ ಪ್ರಕರಣಕ್ಕೂ ಸಂಬಂಧವೇ ಇಲ್ಲ. ನಾನು ಯಾವುದೇ ಅವ್ಯವಹಾರ ಮಾಡಿಲ್ಲ. ಚುನಾವಣಾ ನೀತಿ ಸಂಹಿತೆ ಇದ್ದ ಕಾರಣ ಇಲಾಖೆಯ ಕೆಲಸಗಳಲ್ಲಿ ತಲೆಯೇ ಹಾಕಿಲ್ಲ. ಹಾಗಿದ್ದರೂ ಅವರು ಯಾಕೆ ಡೆತ್ ನೋಟ್ ನಲ್ಲಿ ನನ್ನ ಹೆಸರು ಉಲ್ಲೇಖಿಸಿದ್ದಾರೆ ಎಂದೇ ಗೊತ್ತಿಲ್ಲ ಎಂದಿದ್ದಾರೆ.



Join Whatsapp