Home ಟಾಪ್ ಸುದ್ದಿಗಳು ಕೆಎಎಸ್‌ ಅಧಿಕಾರಿಗಳ ಸಂಘದ ಕಲ್ಯಾಣ ನಿಧಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಒಂದು ತಿಂಗಳ ವೇತನ ದೇಣಿಗೆ

ಕೆಎಎಸ್‌ ಅಧಿಕಾರಿಗಳ ಸಂಘದ ಕಲ್ಯಾಣ ನಿಧಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಒಂದು ತಿಂಗಳ ವೇತನ ದೇಣಿಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಗಳ ಸಚಿವರಾದ ಪ್ರಿಯಾಂಕ್‌ ಖರ್ಗೆ ಅವರು ತಮ್ಮ ಒಂದು ತಿಂಗಳ ವೇತನವನ್ನು ಕೆಎಎಸ್‌ ಅಧಿಕಾರಿಗಳ ಕಲ್ಯಾಣ ನಿಧಿಗೆ ದೇಣಿಗೆ ನೀಡುವುದಾಗಿ ಪ್ರಕಟಿಸಿದ್ದಾರೆ.

ಇಂದು (ಆ.9) ನಡೆದ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಸಚಿವರು ಶತಮಾನೋತ್ಸವ ಅಂಗವಾಗಿ ಕೆ.ಎ.ಎಸ್‌ ಅಧಿಕಾರಿಗಳ ಸಂಘ ಸ್ಥಾಪಿಸಿದ ಕಲ್ಯಾಣ ನಿಧಿಗೆ  ತಮ್ಮ ದೇಣಿಗೆಯನ್ನು ಪ್ರಕಟಿಸಿದರು.

Join Whatsapp
Exit mobile version