ಆರು ತಿಂಗಳಲ್ಲಿ ಆಯುಷ್ಮಾನ್ ಕಾರ್ಡ್ ವಿತರಿಸುವಂತೆ ಸಚಿವ ಸುಧಾಕರ್ ಸೂಚನೆ

Prasthutha|

ಬೆಂಗಳೂರು: ಆರು ತಿಂಗಳೊಳಗೆ ಆಯುಷ್ಮಾನ್ ಕಾರ್ಡ್ ವಿತರಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಸೂಚಿಸಿದ್ದಾರೆ. ಪ್ರತಿಯೊಬ್ಬ ನಾಗರಿಕರಿಗೂ ಪಂಚಾಯತ್ ಮಟ್ಟದಲ್ಲಿ ಆಯುಷ್ಮಾನ್ ಕಾರ್ಡ್ ವಿತರಿಸುವಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.

- Advertisement -

ಕರ್ನಾಟಕವು ಆಯುಷ್ಮಾನ್ ಭಾರತ್ ಯೋಜನೆ ಅನುಷ್ಠಾನದಲ್ಲಿ ಮೊದಲ ಸ್ಥಾನದಲ್ಲಿದ್ದು, 960 ಕೋಟಿ ರೂ.ಗಿಂತಲೂ ಹೆಚ್ಚು ಖರ್ಚು ಮಾಡಿದೆ. ಆಯುಷ್ಮಾನ್ ಕಾರ್ಡ್ ಮೂಲಕ ಎಲ್ಲಾ ನಾಗರಿಕರಿಗೆ ಉಚಿತ ಆರೋಗ್ಯ ಸೇವೆಯನ್ನು ಕೇಂದ್ರ ಸರಕಾರ ನೀಡಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ನಾಗರಿಗರು ಕಾರ್ಡ್ ಪಡೆದುಕೊಂಡಿರುವುದರ ಬಗ್ಗೆ ಖಚಿತಪಡಿಸುಕೊಳ್ಳಬೇಕು ಎಂದು ಹೇಳಿದ್ದಾರೆ.

ಆಯುಷ್ಮಾನ್ ಯೋಜನೆಯ ಅಡಿಯಲ್ಲಿ 6.68 ಕೋಟಿ ಜನರು ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ರಾಜ್ಯವು ಮೂರನೇ ಅತಿ ಹೆಚ್ಚು 997 ಜನೌಷದಿ ಕೇಂದ್ರಗಳನ್ನು ಹೊಂದಿದೆ ಎಂದು ಸುಧಾಕರ್ ಮಾಹಿತಿ ನೀಡಿದ್ದಾರೆ.

Join Whatsapp