ಸಚಿವ ಸುನೀಲ್ ಕುಮಾರ್ ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷ!?

Prasthutha|

ಬೆಂಗಳೂರು: ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಅಂತಿಮವಾಗಿದ್ದು , ಘೋಷಣೆಯೊಂದೇ ಬಾಕಿಯಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಮತ್ತು ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಿಗಲಿದೆ ಎಂದು ತಿಳಿದು ಬಂದಿದೆ.

- Advertisement -

ಹಾಲಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಆಗಸ್ಟ್‌ ತಿಂಗಳಿನಲ್ಲಿ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ರೆಸಾರ್ಟ್‌‌ವೊಂದರಲ್ಲಿ ಬಿಜೆಪಿ ಚಿಂತನ ಮಂಥನ ಸಭೆ ನಡೆಸಿತ್ತು. ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಸುನೀಲ್‌ ಕುಮಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎನ್ನಲಾಗುತ್ತಿದೆ.

ಬಿಜೆಪಿ ಚಿಂತನ ಮಂಥನ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ನಳಿನ್ ಕುಮಾರ್ ಕಟೀಲ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.  ಅದರಲ್ಲಿ ಸುನಿಲ್ ಕುಮಾರ್ ಹೆಸರು ಅಂತಿಮವಾಗಿದ್ದು ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡುವುದೊಂದೇ ಬಾಕಿ ಇದೆ ಎನ್ನಲಾಗುತ್ತಿದೆ.



Join Whatsapp