ಸಚಿವ ಝಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ‘ಹೈ’ ಆದೇಶದಲ್ಲಿ ಮಧ್ಯಪ್ರವೇಶಿಸಲು ‘ಸುಪ್ರೀಂ’ ನಕಾರ

Prasthutha|

ಬೆಂಗಳೂರು: ತಮ್ಮ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೈಕೋರ್ಟ್ ಆದೇಶದಲ್ಲಿ ಮಧ್ಯ ಪ್ರವೇಶಿಸಲು ಸಚಿವ ಝಮೀರ್ ಕೋರಿದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

- Advertisement -

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಝಮೀರ್ ಅಹಮದ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದಿದೆ. ತನಿಖೆಗೆ ನೀಡಿದ್ದ ಮಧ್ಯಾಂತರ ತಡೆಯ ಮುಂದುವರಿಕೆಗೆ ಆದೇಶಿಸಿದೆ.

80.44 ಕೋಟಿ ಆದಾಯ ಮೀರಿ ಅಕ್ರಮ ಆಸ್ತಿ ಪ್ರಕರಣದಲ್ಲಿ ಝಮೀರ್ ವಿರುದ್ಧ ಎಸಿಬಿ ಕೇಸ್ ದಾಖಲಿಸಿತ್ತು. ಪ್ರಕರಣ ರದ್ದುಗೊಳಿಸುವಂತೆ ಝಮೀರ್ ಅಹ್ಮದ್ ಅರ್ಜಿ ಸಲ್ಲಿಸಿದ್ದರು. ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಝಮೀರ್ ಅಹ್ಮದ್ ಮನೆಯ ಮೇಲೆ ದಾಳಿ ನಡೆಸಿದ್ದ ಎಸಿಬಿ, 2022ರ ಮೇ ತಿಂಗಳಲ್ಲಿ ಎಫ್‌ಐಆರ್ ದಾಖಲಿಸಿತ್ತು.



Join Whatsapp