ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ ವಿದೇಶಾಂಗ ಸಚಿವಾಲಯ

Prasthutha|

ಹೊಸದಿಲ್ಲಿ: ಕರ್ನಾಟಕ ಸರಕಾರ ಕೋರಿರುವಂತೆ ಪ್ರಜ್ವಲ್ ರೇವಣ್ಣಗೆ ‘ನಿಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಏಕೆ ರದ್ದುಗೊಳಿಸಬಾರದು’ ಎಂದು ಪ್ರಶ್ನಿಸಿ ವಿದೇಶಾಂಗ ಸಚಿವಾಲಯ (ಎಂಇಎ) ಶೋಕಾಸ್ ನೋಟಿಸ್ ಜಾರಿ ಮಾಡಿದೆ.

- Advertisement -

ಪ್ರಜ್ವಲ್ ರೇವಣ್ಣರ ಪಾಸ್‌ಪೋರ್ಟ್ ರದ್ದುಗೊಳಿಸುವ ಪ್ರಕ್ರಿಯೆಯ ಭಾಗವಾಗಿ ಇಮೇಲ್ ಮೂಲಕ ಶೋಕಾಸ್ ನೋಟಿಸ್ ನೀಡಲಾಗಿದೆ.

1967 ರ ಪಾಸ್‌ಪೋರ್ಟ್ ಕಾಯ್ದೆಯ ನಿಬಂಧನೆಗಳು ಮತ್ತು ಸಂಬಂಧಿತ ನಿಯಮಗಳ ಅಡಿಯಲ್ಲಿ ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸುವ ಪ್ರಕ್ರಿಯೆಯನ್ನು ಎಂಇಎ ಕೈಗೊಳ್ಳುತ್ತಿದೆ ಎನ್ನಲಾಗಿದೆ. ಪಾಸ್‌ಪೋರ್ಟ್ ರದ್ದುಗೊಂಡರೆ ಪ್ರಜ್ವಲ್ ವಿದೇಶದಲ್ಲಿ ಉಳಿಯುವುದು ಕಾನೂನುಬಾಹಿರವಾಗುತ್ತದೆ ಮತ್ತು ಅವರು ಉಳಿದುಕೊಂಡಿರುವ ದೇಶದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ.



Join Whatsapp