ಹಾಸನ : ಅಂಗನವಾಡಿ ಶಾಲೆಯ ಆವರಣದಲ್ಲಿ ಹಾವು ಕಚ್ಚಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ರೋಷನ್ (4) ಎಂದು ಗುರುತಿಸಲಾಗಿದ್ದು, ಅಂಗನವಾಡಿ ಸಹಾಯಕಿ ಮಕ್ಕಳನ್ನು ಕರೆ ತರಲು ಮನೆಗಳಿಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ರೋಷನ್ನಿನ್ನು ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೈಕ್ನಕಲ್ಲಿ ಕರೆ ತಂದಿದ್ದಾರೆ. ಆದರೆ ಅಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸಕಲೇಶಪುರ ಪಟ್ಟಣ್ಣದ ಆಸ್ಪತ್ರೆಗೆ ತೆರಳುವಂತೆ ತಿಳಿಸಿದ ಹಿನ್ನೆಲೆಯಲ್ಲಿ ಆಂಬ್ಯುಲೆನ್ಸ್ ಗೆ ಕರೆ ಮಾಡಿದರೂ ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಸಿಗದೆ ಹೋದುದರಿಂದ ಬಾಲಕ ಸಾವನ್ನಪ್ಪಿದ್ದಾನೆಂದು ತಿಳಿದು ಬಂದಿದೆ.
ಈ ಕುರಿತು ಆಕ್ರೋಶವ್ಯಕ್ತಪಡಿಸಿರುವ ಪೋಷಕರು ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಸಿಗದೇ ಇರುವುದೇ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.