ಬೆಂಗಳೂರು: ಚಿಕ್ಕಬಳ್ಳಾಪುರ ತಾಲೂಕಿನ ವಿವಿಧೆಡೆ ಮಂಗಳವಾರ ರಾತ್ರಿ ಭೂಕಂಪನದ ಅನುಭವವಾಗಿದೆ.
ತಾಲ್ಲೂಕಿನ ಮಂಡಿಕಲ್ಲು ಹೋಬಳಿಯ ಶೆಟ್ಟಿಗೆರೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ತಡರಾತ್ರಿ 3 ಗಂಟೆಯಿಂದ ಎರಡ್ಮೂರು ಬಾರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಕೆಲವು ಮನೆಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.
ರಿಕ್ಟರ್ ಮಾಪಕದಲ್ಲಿ 2.6 ತೀವ್ರತೆ ದಾಖಲಾಗಿದೆ. ಇದು ಲಘು ಭೂಕಂಪನವಾಗಿದ್ದು, ಯಾರಿಗೂ ಯಾವುದೇ ಅಪಾಯವಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲವೆಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದ್ದಾರೆ.