Home ಟಾಪ್ ಸುದ್ದಿಗಳು ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್; ಕೆಲ ಆರೋಪಿಗಳು ಪೊಲೀಸ್ ವಶಕ್ಕೆ

ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್; ಕೆಲ ಆರೋಪಿಗಳು ಪೊಲೀಸ್ ವಶಕ್ಕೆ

ಬೆಂಗಳೂರು: ಪರಿಚಯದ  ಹುಡುಗರೇ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಗರದಲ್ಲಿ ನಡೆದಿದೆ.

17 ವರ್ಷದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ  ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು  ಬಾಲಕಿಯ ಪೋಷಕರು ಬ್ಯಾಟರಾಯನಪುರ ಪೊಲೀಸರಿಗೆ ದೂರು ನೀಡಿದ್ದಾರೆ.

ಪೋಷಕರ ದೂರು ದಾಖಲಿಸಿ ತನಿಖೆಯನ್ನು ಕೈಗೊಂಡ ಪೊಲೀಸರಿಗೆ ಬೇರೆ ಬೇರೆ ಸಮಯದಲ್ಲಿ ಆಕೆಯನ್ನು ಯುವಕರು ಬಳಸಿಕೊಂಡಿರುವುದು  ಹಾಗೂ ಆಕೆಯ ಕೆಲ ಖಾಸಗಿ ಫೋಟೋಗಳನ್ನು ಸಹ ಇಟ್ಟುಕೊಂಡಿರುವುದು ತಿಳಿದು ಬಂದಿದೆ.

ಈ ಸಂಬಂಧ ತನಿಖೆ ತೀವ್ರಗೊಳಿಸಿ ಕೆಲ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನೆಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version