ಕೂಲಿಗೆ ಬಂದಿದ್ದ ಕುಟುಂಬದ 12 ವರ್ಷದ ಬಾಲಕಿಯ ಅತ್ಯಾಚಾರ ಯತ್ನ ; ಬರ್ಬರ ಹತ್ಯೆ | ಮಂಡ್ಯದಲ್ಲಿ ಪ್ರತಿಭಟನೆ

Prasthutha: December 3, 2020

ಮಂಡ್ಯ : 12 ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಕುಯ್ದು ಭೀಕರ ಹತ್ಯೆ ನಡೆದ ಘಟನೆ ಮಂಡ್ಯದಲ್ಲಿ ನಡೆದಿದೆ. ಈ ಸಂಬಂಧ ಇಂದು ಜಿಲ್ಲೆಯ ಹಲವು ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿವೆ.

ಬಳ್ಳಾರಿ ಜಿಲ್ಲೆಯಿಂದ ಕೂಲಿಗಾಗಿ ಬಂದಿದ್ದ ಲಂಬಾಣಿ ಕುಟುಂಬವೊಂದರ 12 ವರ್ಷದ ಬಾಲಕಿಯನ್ನು ಕಬ್ಬಿನ ಗದ್ದೆಯಲ್ಲಿ ಅತ್ಯಾಚಾರಕ್ಕೆ ಯತ್ನಿಸಿ, ಒಪ್ಪದಿದ್ದಾಗ ಬರ್ಬರ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಹಲವು ಸಂಘಟನೆಗಳ ಪ್ರಮುಖರು ನಗರದಲ್ಲಿ ಮೆರವಣಿಗೆ ನಡೆಸಿ, ಎಸ್ಪಿ ಕಚೇರಿ ಬಳಿ ಧರಣಿ ಕುಳಿತು ನ್ಯಾಯಕ್ಕಾಗಿ ಆಗ್ರಹಿಸಿದರು. ಕೂಲಿಗೆ ಬರುವ ವಲಸೆ ಕಾರ್ಮಿಕರಿಗೆ ಸೂಕ್ತ ಮೂಲಭೂತ ಸೌಕರ್ಯ ಒದಗಿಸುವಂತೆ ಒತ್ತಾಯಿಸಿದರು.

ಪ್ರಕರಣಕ್ಕೆ ಸಂಬಂಧಿಸಿ ಓರ್ವ ಯುವಕನನ್ನು ವಶಕ್ಕೆ ಪಡೆಯಲಾಗಿದ್ದು, ಆತನನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಹೋರಾಟಗಾರರಾ ಆಗ್ರಹಿಸಿದರು. ನ್ಯಾಯ ಸಿಗದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.  

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!