ಒರಿಸ್ಸಾದಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ: ಇಬ್ಬರು ದುಷ್ಕರ್ಮಿಗಳ ಬಂಧನ

Prasthutha|

ದಿಯೋಗರ್: ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದಾಗ 12ರ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಸಂತ್ರಸ್ತೆ ಬಾಲಕಿಯ ಹೆತ್ತವರು ನೀಡಿದ ದೂರಿನ ಆಧಾರದಲ್ಲಿ ರಿಯಾಮಾಲ್ ಪೊಲೀಸರು ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು.

- Advertisement -

ಟ್ಯೂಷನ್ ಮುಗಿಸಿ ಮನೆಗೆ ಹಿಂದಿಗುತ್ತಿದ್ದ ಬಾಲಕಿಯನ್ನು ಅಪರಿಚಿತ ದುಷ್ಕರ್ಮಿಗಳು ಅಪಹರಿಸಿದ ನಂತರ ನಿರ್ಜನ ಸ್ಥಳದಲ್ಲಿ ಅತ್ಯಾಚಾರ ನಡೆಸಿದ್ದರು. ಘಟನೆಯ ನಂತರ ಮನೆಗೆ ಆಗಮಿಸಿದ ಬಾಲಕಿಗೆ ನಡೆದ ಘಟನೆಯನ್ನು ಹೆತ್ತವರಿಗೆ ತಿಳಿಸಿದ್ದಾಳೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

- Advertisement -