ಅತ್ಯಾಚಾರ ಪ್ರಕರಣದ ಆರೋಪಿಯ ತಾಯಿಗೆ ಗುಂಡಿಕ್ಕಿದ ಬಾಲಕಿ

Prasthutha|

ದೆಹಲಿ: ಅತ್ಯಾಚಾರ ಪ್ರಕರಣದ ಆರೋಪಿಯ ತಾಯಿಗೆ ಬಾಲಕಿ ಗುಂಡಿಕ್ಕಿದ ಘಟನೆ ಈಶಾನ್ಯ ದೆಹಲಿಯ ಘೋಂಡಾ ಪ್ರದೇಶದಲ್ಲಿ ನಡೆದಿದೆ.

- Advertisement -


50 ವರ್ಷದ ಮಹಿಳೆಯ ಮೇಲೆ ಗುಂಡಿಕ್ಕಿದ ಬಾಲಕಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡೇಟಿಗೆ ಒಳಗಾಗಿ ಗಾಯಗೊಂಡಿರುವ ಮಹಿಳೆ ಘೋಂಡಾದ ಸುಬಾಷ್ ಮೊಹಲ್ಲಾದ ನಿವಾಸಿ ಖುರ್ಷಿದಾ ಅವರನ್ನು ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಖುರ್ಷಿದಾ ಅವರ ಮಗನ ವಿರುದ್ಧ ಇದೇ ಬಾಲಕಿ 2021ರಲ್ಲಿ ಪೋಕ್ಸೊ ಕಾಯಿದೆ ಮತ್ತು ಇತರ ಕಾಯ್ದೆಗಳ ಅಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಳು ಎನ್ನಲಾಗಿದೆ.

ಶನಿವಾರ ಸಂಜೆ 5:30ರ ವೇಳೆ ಖುರ್ಷೀದಾ ನಡೆಸುತ್ತಿದ್ದ ಕಿರಾಣಿ ಅಂಗಡಿಗೆ ಬಂದಿದ್ದ ಬಾಲಕಿ ಪಿಸ್ತೂಲ್ನಿಂದ ಗುಂಡು ಹಾರಿಸಿದ್ದಳು.

Join Whatsapp