ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿ ಭರತ್ ಸೋನಿಯ ಮನೆ ಕೆಡವಲು ಪಾಲಿಕೆ ಆದೇಶ

Prasthutha|

ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಮನೆಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ನಾಳೆ ನೆಲಸಮ ಮಾಡಲಾಗುವುದು ಎಂದು ಉಜ್ಜಯಿನಿ ಮಹಾನಗರ ಪಾಲಿಕೆ ತಿಳಿಸಿದೆ.

- Advertisement -


15 ವರ್ಷದ ಬಾಲಕಿಯೊಬ್ಬಳು ಅರೆಬೆತ್ತಲೆಯಾಗಿ, ರಕ್ತಸ್ರಾವವಾಗುತ್ತಿರುವಾಗ ಜನರಲ್ಲಿ ಸಹಾಯಕ್ಕೆ ಅಂಗಲಾಚುತ್ತಿರುವ ವಿಡಿಯೊ ಕಳೆದ ವಾರ ವೈರಲ್ ಆಗಿತ್ತು. ಈ ಪ್ರಕರಣದಲ್ಲಿ ಆರೋಪಿ ಭರತ್ ಸೋನಿ ಎಂಬ ಆಟೋ ರಿಕ್ಷಾ ಚಾಲಕನನ್ನು ಗುರುವಾರ ಬಂಧಿಸಲಾಗಿದೆ. ಸದ್ಯ ಭರತ್ ಜೈಲಿನಲ್ಲಿದ್ದು ವಿಚಾರಣೆಗಾಗಿ ಕಾಯುತ್ತಿದ್ದಾನೆ. ಈತನ ಕುಟುಂಬವು ಸರ್ಕಾರಿ ಭೂಮಿಯಲ್ಲಿರುವ ಮನೆಯಲ್ಲಿ ವರ್ಷಗಳಿಂದ ವಾಸಿಸುತ್ತಿದೆ ಎಂದು ಉಜ್ಜಯಿನಿ ಮಹಾನಗರ ಪಾಲಿಕೆ ತಿಳಿಸಿದೆ.