ಮಂಗಳೂರು: ಮಹಿಳೆಯ ಅಸಹಾಯಕತೆಯ ದುರುಪಯೋಗ | ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯ ಪೊಲೀಸ್ ವಶಕ್ಕೆ

Prasthutha|

ಮಂಗಳೂರು: ನಿವೇಶನ ರಹಿತ ಮಹಿಳೆಯೊಬ್ಬರ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡು ಅನುಚಿತವಾಗಿ ವರ್ತಿಸಿದ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯನೊಬ್ಬನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಇಲ್ಲಿನ ಮುನ್ನೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯ ಬಾಬು ಶೆಟ್ಟಿ ಎಂಬಾತನೇ ಸದ್ಯ ಪೊಲೀಸ್ ವಶದಲ್ಲಿರುವ ಆರೋಪಿ. ಈತ ಮಹಿಳೆಯೊಬ್ಬರನ್ನು ಮನವಿ ಕೊಡುವ ನೆಪದಲ್ಲಿ ಗ್ರಾಮ ಪಂಚಾಯತ್ ಕಚೇರಿಗೆ ಕರೆದಿದ್ದು, ಬಳಿಕ ಅಧ್ಯಕ್ಷರ ಛೇಂಬರ್ ನಲ್ಲಿ ಅನುಚಿತವಾಗಿ ವರ್ತಿಸಿದ್ದಾಗಿ ಸಂತ್ರಸ್ತ ಮಹಿಳೆಯು ದೂರಿದ್ದಾರೆ.

ಸಂತ್ರಸ್ತೆ ಮಹಿಳೆಯು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಉಳ್ಳಾಲ ಪೊಲೀಸರು, ಆರೋಪಿ ಬಾಬು ಶೆಟ್ಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.

- Advertisement -

ಮುನ್ನೂರು ಗ್ರಾಮ ಪಂಚಾಯತ್ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನಕ್ಕೆ ರಾಷ್ಟ್ರ ಮಟ್ಟದಲ್ಲಿ ಪ್ರಶಂಸೆ ಪಡೆದಿದೆ. ಅಲ್ಲದೆ ಎರಡು ಬಾರಿ ‘ಗಾಂಧಿ ಗ್ರಾಮ’ ಹೆಗ್ಗಳಿಕೆಗೆ ಪಾತ್ರವಾಗಿದೆ. ಹಾಗಾಗಿ ಇಂತಹ ಪಂಚಾಯತ್ ಕಚೇರಿಯಲ್ಲಿ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿರುವ ಪಂಚಾಯತ್ ಸದಸ್ಯನ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಡಿವೈಎಫ್ಐ ಒತ್ತಾಯಿಸಿತ್ತು.



Join Whatsapp