Home ಟಾಪ್ ಸುದ್ದಿಗಳು ಶಾಸಕರ ಕುಟುಂಬದ ದುರ್ವರ್ತನೆ; ದಬ್ಬಾಳಿಕೆಯಿಂದ ನೊಂದ ದಲಿತರು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಶಾಸಕರ ಕುಟುಂಬದ ದುರ್ವರ್ತನೆ; ದಬ್ಬಾಳಿಕೆಯಿಂದ ನೊಂದ ದಲಿತರು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಹಾವೇರಿ: ಶಾಸಕ ನೆಹರು ಓಲೇಕಾರ್ ಕುಟುಂಬ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ  ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಶಿಡೇನೂರು ಗ್ರಾಮದಲ್ಲಿ ನಡೆದಿದೆ.

ದಲಿತ ಸಮುದಾಯದವರಾದ ಪಾಂಡಪ್ಪ ಲಮಾಣಿ (70), ಗುರುಚಪ್ಪ ಲಮಾಣಿ (72), ಗಂಗವ್ವ ಕಬ್ಬೂರು (65), ಮತ್ತು ಹನುಮಂತಪ್ಪ ಬಡಿಗೇರ (41) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಗಳು. ವಿಷ ಸೇವಿಸಿ ಅಸ್ವಸ್ಥರಾಗಿದ್ದ ಇವರಿಗೆ ಬ್ಯಾಡಗಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆ ಎದುರು ಜಮಾಯಿಸಿದ ಗ್ರಾಮಸ್ಥರು ಶಾಸಕ ಓಲೇಕಾರ ಹಾಗೂ ಅವರ ಪುತ್ರ ಮಂಜುನಾಥ್ ವಿರುದ್ಧ ಘೋಷಣೆ ಕೂಗಿ ಅವರನ್ನು ಬಂಧಿಸುವಂತೆ ಒತ್ತಾಯಿಸಿದರು.

ಶಿಡೇನೂರು ಗ್ರಾಮದಲ್ಲಿ 29 ಕುಟುಂಬಗಳು ಅಕ್ರಮ ಸಕ್ರಮ ಜಮೀನಿನಲ್ಲಿ ಸಾಗುವಳಿ ಮಾಡುತ್ತಿವೆ. ಆದರೆ ತಾವು ಸಾಗುವಳಿ ಮಾಡುತ್ತಿರುವ ಜಮೀನಿನಲ್ಲಿ ಪ್ರತಿ ಕುಟುಂಬವೂ ತಲಾ 15 ಗುಂಟೆ ಜಮೀನು ಬಿಟ್ಟುಕೊಡಬೇಕು ಎಂದು ಶಾಸಕ ನೆಹರು ಓಲೇಕಾರ್ ಮತ್ತು ಅವರ ಮಕ್ಕಳು ಒತ್ತಾಯಿಸಿದ್ದಾರೆ.ಜಮೀನು ಬಿಟ್ಟುಕೊಡದಿದ್ದ ಕಾರಣ  ಗ್ರಾಮದ ಜನರು ಕೃಷಿಗೆ ಸಹಕಾರ ಕೊಡದಂತೆ ಮಾಡಿದ್ದಾರೆ ಎನ್ನಲಾಗಿದೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version